ವಿಜಯಸಾಕ್ಷಿ ಸುದ್ದಿ, ಗದಗ: ನಗರದ ವಿದ್ಯಾದಾನ ಸಮಿತಿ ಹಾಗೂ ಜ್ಞಾನಗಂಗಾ ಸೇವಾ ಪ್ರತಿಷ್ಠಾನ ಇವುಗಳ ಸಂಯುಕ್ತಾಶ್ರಯದಲ್ಲಿ 30 ದಿನಗಳ ಕಾಲ ನಡೆದ ಬೇಸಿಗೆ ಶಿಬಿರದ ಮಕ್ಕಳಿಗೆ ಒಂದು ದಿನದ ಹೊರಸಂಚಾರವನ್ನು ಕೈಗೊಳ್ಳಲಾಯಿತು.
Advertisement
ಜ್ಞಾನಗಂಗಾ ಸೇವಾ ಪ್ರತಿಷ್ಠಾನದ ಸಂಸ್ಥಾಪಕರು ಹಾಗೂ ಎಂ.ಬಿ. ಹುಯಿಲಗೋಳ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಗಂಗೂಬಾಯಿ ಪವಾರ, ವಿ.ಡಿ.ಎಸ್ ಕ್ಲಾಸಿಕ್ ಆಂಗ್ಲ ಮಾಧ್ಯಮ ಸಿಬಿಎಸ್‌ಇ ಶಾಲೆಯ ಪ್ರಾಚಾರ್ಯ ಎಂ.ಆರ್. ಡೊಳ್ಳಿನ ಶಾಲಾ ವಾಹನಕ್ಕೆ ಪೂಜೆ ಸಲ್ಲಿಸಿ ಮಕ್ಕಳಿಗೆ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಪಿ.ಎಚ್. ಕಡಿವಾಳ, ಎಸ್.ವಾಯ್, ಕಠಾರಿ, ಶಶಿಧರ ಹೊಸಳ್ಳಿ, ಬೇಸಿಗೆ ಶಿಬಿರದ ಶಿಕ್ಷಕರು, ಸಿಬ್ಬಂದಿ ವರ್ಗದವರು, ಪಾಲಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.