ಮೇ.18ರಿಂದ ರಾಜ್ಯ ಸರಕಾರಿ ನೌಕರ ಸಂಘದ ರಾಜ್ಯಮಟ್ಟದ ಕ್ರೀಡಾಕೂಟ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ನೇತೃತ್ವದಲ್ಲಿ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಮೇ 18ರಿಂದ 20ರವರೆಗೆ 3 ದಿನಗಳ ಕಾಲ ಶಿವಮೊಗ್ಗದಲ್ಲಿ ಏರ್ಪಡಿಸಲಾಗಿದೆ ಎಂದು ಗದಗ ಜಿಲ್ಲಾ ಸರಕಾರಿ ನೌಕರ ಸಂಘದ ಅಧ್ಯಕ್ಷ ಹಾಗೂ ಗದಗ ತಾಲೂಕು ಓಬಿಸಿ ಅಧಿಕಾರಿ ಡಾ. ಬಸವರಾಜ ಬಳ್ಳಾರಿ ತಿಳಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವವರು, ಸರಕಾರಿ ನೌಕರರು ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ. ಅವರಲ್ಲಿ ಉತ್ಸಾಹ ಮತ್ತು ಉಲ್ಲಾಸ ಇಮ್ಮಡಿಗೊಳಿಸಿ ಅವರಲ್ಲಿರುವ ಪ್ರತಿಭೆ ಗುರುತಿಸಿ ಪೋಷಿಸುವ ಉದ್ದೇಶದಿಂದ ರಾಜ್ಯ ಸರಕಾರಿ ನೌಕರರ ಸಂಘ ರಾಜ್ಯ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಸಂಘಟಿಸುತ್ತಿದ್ದು, ಈ ಬಾರಿಯ ರಾಜ್ಯ ಮಟ್ಟದ ಕ್ರೀಡಾಕೂಟಗಳು ಶಿವಮೊಗ್ಗ ಜಿಲ್ಲೆಯ ನೆಹರು ಕ್ರೀಡಾಂಗಣದಲ್ಲಿ ನಡೆಯಲಿವೆ.

ಗದಗ ಜಿಲ್ಲೆಯಿಂದ ರಾಜ್ಯ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಯಲ್ಲಿ ಆಯ್ಕೆಯಾಗಿರುವ ಕ್ರೀಡಾಳುಗಳು ರಾಜ್ಯ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಗದಗ ಜಿಲ್ಲೆ ಹಾಗೂ ರಾಜ್ಯದ ಕೀರ್ತಿ ಪತಾಕೆಯನ್ನು ಹಾರಿಸಬೇಕೆಂದು ಡಾ. ಬಸವರಾಜ ಬಳ್ಳಾರಿ ಕರೆ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here