ಮೈಸೂರು: ಗೋವು ಸಾಗಾಣಿಕೆ ವೇಳೆ ಇದ್ರಿಷ್ ಪಾಷಾ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಆರೋಪ ಎದುರಿಸುತ್ತಿದ್ದಾರೆ. ಇದೀಗ ಇದ್ರಿಷ್ ಪಾಷಾ ಸಾವಿನ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂದು ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ವಾಟ್ಸಾಪ್ ಕರೆ ಮಾಡಿ ಕೊಲೆ ಬೆದರಿಕೆ ಹಾಕಲಾಗಿದೆ.
ಈ ಘಟನೆ ಸಂಬಂಧ ಮೈಸೂರಿನ ಉದಯಗಿರಿ ನಿವಾಸಿ ಅಕ್ರಮ್ ಖಾನ್ ಎಂಬಾತನ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಗೋವು ಸಾಗಾಣಿಕೆ ವೇಳೆ ಇದ್ರಿಷ್ ಪಾಷಾ ಅನುಮಾನಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಸೇರಿ ಐವರು ಆರೋಪಿಗಳನ್ನ ಬಂಧಿಸಲಾಗಿತ್ತು. ಬಳಿಕ 2023 ಮೇ ತಿಂಗಳಿನಲ್ಲಿ ಹೈಕೋರ್ಟ್ ಎಲ್ಲರಿಗೂ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.