ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಗೆ ನಾಳೆ ಮತ್ತೆ ಚಾಲನೆ ದೊರೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಇದಕ್ಕಾಗಿ ಎರಡೂ ತಂಡಗಳು ಈಗಾಗಲೇ ಬೆಂಗಳೂರಿನಲ್ಲಿವೆ.
ಅದಲ್ಲದೆ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ನಿನ್ನೆ ಸಿಲಿಕಾನ್ ಸಿಟಿಯಲ್ಲಿ ಮಳೆಯ ಆರ್ಭಟ ಜೋರಾಗಿತ್ತು. ಈ ಮಳೆಯ ನಡುವೆಯೂ ಆರ್ಸಿಬಿಯ ಸ್ಫೋಟಕ ಬ್ಯಾಟ್ಸ್ಮನ್ ಟಿಮ್ ಡೇವಿಡ್ ಮೈದಾನದಲ್ಲಿ ಮೋಜು ಮಾಡುತ್ತಿರುವುದು ಕಂಡುಬಂದಿದೆ. ಇದರ ವಿಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
Tim David enjoying rain and swimming at Chinnaswamy stadium. 😀👌
– A beautiful Video! ❤️
— Tanuj (@ImTanujSingh) May 16, 2025
ಭಾರೀ ಮಳೆಯಿಂದಾಗಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣವು ನೀರಿನಿಂದ ತುಂಬಿತ್ತು. ಇದರಲ್ಲಿ ಟಿಮ್ ಡೇವಿಡ್ ಈಜುತ್ತಿರುವುದು ಕಂಡುಬಂದಿದೆ. ಮಳೆಯ ಮಧ್ಯೆ ಟಿಮ್ ಸಖತ್ ಎಂಜಾಯ್ ಮಾಡಿದರು.
ಸ್ವಿಮ್ ಮಾಡಿ ಆರ್ಸಿಬಿ ಡ್ರೆಸ್ಸಿಂಗ್ ರೂಮ್ಗೆ ಬಂದಾಗ ತಂಡದ ಉಳಿದ ಆಟಗಾರರು ಅವರನ್ನು ಜೋರಾಗಿ ನಗುತ್ತಾ ಮತ್ತು ಚಪ್ಪಾಳೆ ತಟ್ಟುವ ಮೂಲಕ ಸ್ವಾಗತಿಸಿದರು. ಟಿಮ್ ಡೇವಿಡ್ ಅವರ ಈ ಮೋಜಿನ ವೀಡಿಯೊವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದೆ. ವಿಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.