ಮೇ 17ರಂದು ಪಠ್ಯ-ಪಠ್ಯೇತರ ಚಟುವಟಿಕೆಗಳ ಸಮಾರೋಪ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ನ್ಯಾಕ್ ಬಿ ಗ್ರೇಡ್ ಮಾನ್ಯತೆ ಪಡೆದಿರುವ ನಗರದ ಸರಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನಲ್ಲಿ 2024-25ನೇ ಸಾಲಿನ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭ ಮೇ 17ರಂದು ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಆವರಣದಲ್ಲಿ ಜರುಗಲಿದೆ.

Advertisement

ಮುಖ್ಯ ಅತಿಥಿಗಳಾಗಿ ಖ್ಯಾತ ಜಾನಪದ ಕಲಾವಿದ, ಜಂತ್ಲಿ ಶಿರೂರು ಗ್ರಾಮದ ಗವಿಸಿದ್ದಯ್ಯ ಹಳ್ಳಿಕೇರಿಮಠ ಪಾಲ್ಗೊಳ್ಳುವರು. ಅಧ್ಯಕ್ಷತೆಯನ್ನು ಪ್ರಾಚಾರ್ಯ ಎಂ.ಯು. ಹಿರೇಮಠ್ ವಹಿಸುವರು. ಸಂಸ್ಕೃತಿಕ ವಿಭಾಗದ ಸಂಯೋಜಕ ಎಸ್.ಯು. ಸಜ್ಜನಶೆಟ್ಟರ್, ಕ್ರೀಡಾ ಹಾಗೂ ಎನ್‌ಎಸ್‌ಎಸ್ ಘಟಕ ಸಂಯೋಜಕರಾದ ಮಹಾಲಕ್ಷ್ಮೀ ಹುಟಗಿ, ಕಾಲೇಜು ಅಭಿವೃದ್ಧಿ ಸಮಿತಿಯ ಸರ್ವ ಸದಸ್ಯರು, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿ ಪ್ರತಿನಿಧಿಗಳು, ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಾಚಾರ್ಯರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here