Kolara: ವಿದ್ಯುತ್ ತಂತಿ ಸ್ಪರ್ಶಿಸಿ 58 ವರ್ಷದ ಬೈಕ್ ಸವಾರ ಸಾವು!

0
Spread the love

ಕೋಲಾರ:- ವಿದ್ಯುತ್ ತಂತಿ ಸ್ಪರ್ಶಿಸಿ 58 ವರ್ಷದ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಜೇಂದ್ರ ಹಳ್ಳಿಯಲ್ಲಿಂದು ಜರುಗಿದೆ. ಗಾಳಿ ಮಳೆಯಿಂದ ವಿದ್ಯುತ್ ಕಂಬ ನೆಲಕ್ಕುರಳಿದ್ದನ್ನು ಗಮನಿಸದೇ ಬೈಕ್ ಚಾಲನೆ ಮಾಡಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ರೆಡ್ಡಪ್ಪ ಮೃತ ಸವಾರ. ಕಳೆದ ರಾತ್ರಿ ಬಿರುಗಾಳಿ ಮಳೆಯಿಂದ ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿದ್ದವು. ತಂತಿಗಳು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇಂದು ಮುಂಜಾನೆ ಎದ್ದು ಎಂದಿನಂತೆ ತೋಟಕ್ಕೆ ತೆರಳುವ ವೇಳೆ ಬೈಕ್‌ಗೆ ತಂತಿ ಸ್ಪರ್ಶವಾಗಿ ರೆಡ್ಡಪ್ಪ ಸಾವನ್ನಪ್ಪಿದ್ದಾರೆ.

Advertisement

ರೆಡ್ಡಪ್ಪ ಮುಳಬಾಗಿಲು ಕೆಎಸ್‌ಆರ್‌ಟಿಸಿ ಘಟಕದಲ್ಲಿ ಸಂಚಾರಿ ನಿಯಂತ್ರಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಬೆಸ್ಕಾಂ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ವಿದ್ಯುತ್ ತಂತಿಗಳ ತೆರವು ಕಾರ್ಯ ಮಾಡಲಾಗಿದೆ. ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ ಎಂದು ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here