ಬೆಂಗಳೂರು:- ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಕರ್ನಾಟಕದಾದ್ಯಂತ ಸಾಧಾರಣದಿಂದ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ಕೊಡಗು, ಬೆಳಗಾವಿ, ಬೀದರ್, ರಾಯಚೂರು, ಯಾದಗಿರಿ, ದಾವಣಗೆರೆ, ಚಿತ್ರದುರ್ಗ ಮುಂತಾದ ಸ್ಥಳಗಳಲ್ಲಿ ಮಳೆ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.
ಮುಂದಿನ ಏಳು ದಿನಗಳಲ್ಲಿ ಈ ಎಲ್ಲಾ ಜಿಲ್ಲೆಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



