ರಾಯಚೂರು:- ಯುವಕನಿಗೆ ನಡುರಸ್ತೆಯಲ್ಲೇ ಚಾಕು ಇರಿದು ಬರ್ಬರವಾಗಿ ಕೊಲೆಗೈದಿರುವ ಘಟನೆ ನಗರದ ಡಾ. ಜಾಕೀರ್ ಹುಸೇನ್ ವೃತ್ತದಲ್ಲಿ ಜರುಗಿದೆ.
ಇಡ್ಲಿ ಬಂಡಿ ವಿಚಾರಕ್ಕೆ ಶುರುವಾದ ಜಗಳ ಸಾವಿನಲ್ಲಿ ಅಂತ್ಯವಾಗಿದೆ. ನಗರದ ಜಹೀರಾಬಾದ್ ನಿವಾಸಿ ಸಾದಿಕ್ (30) ಕೊಲೆಯಾದ ವ್ಯಕ್ತಿ. ಚಾಕು ಇರಿದು ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಹಳೇ ವೈಷಮ್ಯ ಹಿನ್ನೆಲೆ ಚಾಕುವಿನಿಂದ ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದ್ದು, ಕರೀಂ ಮತ್ತು ಗ್ಯಾಂಗ್ ನಿಂದ ಹಲ್ಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸದರ ಬಜಾರ್ ಪೊಲೀಸರು ಘಟನೆ ಬಗ್ಗೆ ಮಾಹಿತಿ ಪಡೆದು ತನಿಖೆ ಆರಂಭಿಸಿದ್ದಾರೆ.



