ಕಿರುತೆರೆ ನಟ ಶಮಂತ್ ಬ್ರೋ ಗೌಡ ಅವರು ಬಹುಕಾಲದ ಗೆಳತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರ ಒಪ್ಪಿಗೆ ಮೇರೆಗೆ ತಾವು ಪ್ರೀತಿಸಿದ್ದ ಹುಡುಗಿ ಮೇಘನಾ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಮದುವೆಯ ಸಂಭ್ರಮದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.
ಪ್ರೀತಿಸಿದ ಹುಡುಗಿ ಮೇಘನಾಗೆ ಖುಷಿ ಖುಷಿಯಾಗಿ ಶಮಂತ್ ತಾಳಿ ಕಟ್ಟುತ್ತಿರುವ ಫೋಟೋ ಸದ್ದು ಮಾಡುತ್ತಿದೆ. ಹೊಸ ಬಾಳಿಗೆ ಕಾಲಿಟ್ಟಿರುವ ನವಜೋಡಿಗೆ ಫ್ಯಾನ್ಸ್ ಶುಭಕೋರಿದ್ದಾರೆ. ನಿನ್ನೆ ರಾತ್ರಿ ನಡೆದ ಆರತಕ್ಷತೆಗೆ ದಿಯಾ ಖ್ಯಾತಿಯ ಪೃಥ್ವಿ ಅಂಬರ್, ಬಿಗ್ ಬಾಸ್ ನವಾಜ್, ರ‍್ಯಾಪರ್ ಆಲ್ ಓಕೆ, ನಟಿ ಮೌನ ಗುಡ್ಡೆಮನೆ, ‘ಭಾಗ್ಯಲಕ್ಷ್ಮಿ’ ಸೀರಿಯಲ್ ಬಾಲನಟ ಗುಂಡಣ್ಣ ಅಲಿಯಾಸ್ ನಿಹಾರ್, ತನ್ವಿ ಅಲಿಯಾಸ್ ಅಮೃತಾ ಸೇರಿದಂತೆ ಅನೇಕರು ಭಾಗಿಯಾಗಿದ್ದಾರೆ.
ಕಾಲೇಜ್ ಕಾರ್ಯಕ್ರಮವೊಂದರಲ್ಲಿ ಶಮಂತ್ ಗೆಸ್ಟ್ ಆಗಿ ಆಗಮಿಸಿದ್ದರು. ಅಲ್ಲಿ ಮೇಘನಾ ಪರಿಚಯ ಆಗಿತ್ತು. ಅಲ್ಲಿಂದ ಶುರುವಾದ ಸ್ನೇಹ ಮದುವೆಗೆ ಮುನ್ನುಡಿ ಬರೆದಿದೆ. ಮನೆಯವರ ಸಮ್ಮತಿ ಪಡೆದು ಇತ್ತೀಚೆಗೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.