ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ತಯಾರಿಗಾಗಿ ಸೌತ್ ಆಫ್ರಿಕಾ ಆಟಗಾರರು ಮೇ 26 ರಂದು ತವರಿಗೆ ತೆರಳಲಿದ್ದಾರೆ. ಹೀಗಾಗಿ ಲುಂಗಿ ಎನ್ಗಿಡಿ ಆರ್ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.
ಇತ್ತ ಲುಂಗಿ ಎನ್ಗಿಡಿ ಹೊರಗುಳಿಯುವುದು ಖಚಿತವಾಗುತ್ತಿದ್ದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬದಲಿ ಆಟಗಾರನನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಆರ್ಸಿಬಿ ತಂಡದ ಪ್ಲೇಆಫ್ ಪಂದ್ಯಗಳಿಗೆ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಆಯ್ಕೆಯಾಗಿದ್ದಾರೆ.
ಬ್ಲೆಸಿಂಗ್ ಮುಝರಬಾನಿ ಝಿಂಬಾಬ್ವೆ ಪರ ಈವರೆಗೆ 70 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1449 ಎಸೆತಗಳನ್ನು ಎಸೆದಿರುವ ಅವರು 78 ವಿಕೆಟ್ಗಳನ್ನು ಕಬಳಿಸಿದ್ದಾರೆ. ಅದು ಕೂಡ ಕೇವಲ 7.03 ರನ್ ಎಕಾನಮಿ ರೇಟ್ನಲ್ಲಿ ಎಂಬುದು ವಿಶೇಷ. ಹೀಗಾಗಿಯೇ ಇದೀಗ ಬ್ಲೆಸಿಂಗ್ ಮುಝರಬಾನಿ ಅವರನ್ನು ಲುಂಗಿ ಎನ್ಗಿಡಿ ಬದಲಿಯಾಗಿ ಆರ್ಸಿಬಿ ಮಾಡಿಕೊಂಡಿದೆ.
ಇನ್ನು ಆರ್ಸಿಬಿ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿಯಲಿದೆ. ಮೇ 23 ರಂದು ನಡೆಯಲಿರುವ ಈ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಾದ ಬಳಿಕ ಆರ್ಸಿಬಿ ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.