ಮೈಸೂರು: ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ. ಸರ್ಕಾರದ ಎರಡು ವರ್ಷದ ಸಾಧನೆಯ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು,
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ್ದರಿಂದಾಗಿ ಸಾಧನ ಸಮಾವೇಶವನ್ನು ಮಾಡುತ್ತಿದೆ. ಈ ಸಮಾವೇಶದಲ್ಲಿ ನೀವು ಏನು ಹೇಳಿಕೊಳ್ಳುತ್ತೀರಿ? ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಎಂದು ಪ್ರಶ್ನೆ ಮಾಡಿದ್ದಾರೆ.
ಇನ್ನೂ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಪೇಸಿಎಮ್, 40 ಪರ್ಸೆಂಟ್ ಸರ್ಕಾರ, ಬಿಟ್ ಕಾಯಿನ್ ಹಗರಣ ಅಂತೆಲ್ಲ ಆರೋಪಗಳನ್ನು ಮಾಡಿದ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ ಒಂದೇ ಒಂದು ಆರೋಪವನ್ನು ಸಾಬೀತು ಮಾಡೋದು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಬರೀ ಸುಳ್ಳುಗಳನ್ನು ಹೇಳಿ ಅಮಾಯಕ ಜನರಿಗೆ ಗ್ಯಾರಂಟಿ ಯೋಜನೆಗಳ ಆಮಿಶವೊಡ್ಡಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರ ಏನೂ ಮಾಡದೆ ಸಾಧನೆ ಸಮಾವೇಶ ಮಾಡಹೊರಟಿದೆ ಎಂದು ಪ್ರತಾಪ್ ಸಿಂಹ ಹೇಳಿದರು.



