ಬಹುಭಾಷಾ ನಟಿ ಸಂಜನಾ ಗಲ್ರಾನಿ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಲ್ಲದೇ ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ.
ಇತ್ತೀಚೆಗೆ ವಿಶೇಷವಾಗಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿ ತಾವು ಎರಡನೇ ಮಗುವಿನ ನಿರೀಕ್ಷೆಯಲ್ಲಿರುವ ವಿಚಾರವನ್ನು ನಟಿ ಹಂಚಿಕೊಂಡಿದ್ದರು. ಲಾಕ್ಡೌನ್ ಸಮಯದಲ್ಲಿ ಡಾ. ಅಜೀಜ್ ಪಾಷಾ ಅವರನ್ನ ಪ್ರೀತಿಸಿ ವಿವಾಹವಾಗಿದ್ದರು. 2022ರ ಮೇ ತಿಂಗಳಲ್ಲಿ ಸಂಜನಾ ಗಲ್ರಾನಿ ತಮ್ಮ ಮೊದಲ ಮಗುವಿಗೆ ಜನ್ಮ ನೀಡಿದ್ದರು. ಅಜೀಜ್ ಪಾಷಾ ಮತ್ತು ಸಂಜನಾ ದಂಪತಿಗೆ ‘ಅಲಾರಿಕ್’ ಹೆಸರಿನ ಮಗನಿದ್ದಾನೆ.
ಇದೀಗ ಹೆಣ್ಣು ಮಗು ಜನನ ಆಗಿದ್ದು, ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.



