ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಇಂದು ಕೋರ್ಟ್’ಗೆ ಹಾಜರಾಗಲಿರುವ ದರ್ಶನ್, ಪವಿತ್ರಾ ಗೌಡ

0
Spread the love

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ದರ್ಶನ್‌ ಸೇರಿ ಎಲ್ಲಾ 17 ಆರೋಪಿಗಳು ಇಂದು ಮತ್ತೆ ನಗರದ 57ನೇ ಸಿಸಿಹೆಚ್ ಕೋರ್ಟ್​ಗೆ ಹಾಜರಾಗಲಿದ್ದಾರೆ.

Advertisement

ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಜಾಮೀನು ಪಡೆದರೂ ಪ್ರತಿ ತಿಂಗಳು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂಬ ಷರತ್ತು ಹಿನ್ನೆಲೆಯಲ್ಲಿ ಇಂದು ಎಲ್ಲರೂ ಕೋರ್ಟ್​ಗೆ ಹಾಜರಾಗುತ್ತಿದ್ದಾರೆ.

ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳು ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಅದರಂತೆ ಇಂದು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ.

ನಿನ್ನೆಯಷ್ಟೆ ನಟ ದರ್ಶನ್​ ಹಾಗೂ ವಿಜಯಲಕ್ಷ್ಮೀ ದಂಪತಿ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದರು.


Spread the love

LEAVE A REPLY

Please enter your comment!
Please enter your name here