ಮೈಸೂರು: ರಾಜಕೀಯ ನಿವೃತ್ತಿ ಬಗ್ಗೆ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ನೀಡಿದ್ದು, ಇದು ಕಾಂಗ್ರೆಸ್ ಪಾಳಯದಲ್ಲಿ ಭಾರೀ ಸಂಚಲ ಮೂಡಿಸಿದೆ. ಇದೀಗ ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು,
ನನಗೆ ಈಗಾಗಲೇ 75 ವರ್ಷವಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಆಲೋಚನೆಯಿಲ್ಲ. ಯುವಕರಿಗೆ ಅವಕಾಶ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಈ ತೀರ್ಮಾನ ಕೈಗೊಂಡಿದ್ದೇನೆ. ಆದರೆ, ಸಹಕಾರಿ ಕ್ಷೇತ್ರ ಹಾಗೂ ಸಕ್ರೀಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ ಎಂದು ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದರು.
‘ಚುನಾವಣೆಗೆ ನಿಲ್ಲದೆ ಸಹಕಾರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತೇನೆ. ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಮುಂದುವರೆಯುವೆ ಎಂದು ಹೇಳಿದರು.



