ಮೇಕಪ್ ಆರ್ಟಿಸ್ಟ್ ಹೊನ್ನೆ ಗೌಡ ನಿಧನ: ಸಂತಾಪ ಸೂಚಿಸಿದ ನಟ ದರ್ಶನ್

0
Spread the love

ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಅವರ ಸಿನಿಮಾಗಳಿಗೆ ಮೇಕಪ್ ಆರ್ಟಿಸ್ಟ್ ಆಗಿ ಕೆಲಸ ಮಾಡಿದ ಮೇಕಪ್‌ ಆರ್ಟಿಸ್ಟ್‌ ಹೊನ್ನೆ ಗೌಡ ನಿಧನರಾಗಿದ್ದಾರೆ. ಅನೇಕ ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಹೊನ್ನೆ ಗೌಡ ಅವರು ಸಕ್ರಿಯವಾಗಿದ್ದರು. ಹಲವು ಸಿನಿಮಾಗಳಿಗೆ ಅವರು ಮೇಕಪ್ ಆರ್ಟಿಸ್ಟ್ ಆಗಿ ಕೆಲಸ ಮಾಡಿದ್ದರು. ಹೊನ್ನೆ ಗೌಡ ಅವರ ಸಾವಿನ ಸುದ್ದಿ ತಿಳಿದ ನಟ ದರ್ಶನ್‌ ಅವರ ಆತ್ಮಕ್ಕೆ ಶಾಂತಿ ಕೋರಿದ್ದು, ಕುಟುಂಬದವರಿಗೆ ಸಂತಾಪ ಸೂಚಿಸಿದ್ದಾರೆ.

Advertisement

‘25 ವರ್ಷಗಳಿಂದ ನನ್ನೊಂದಿಗೆ ಕೆಲಸ ಮಾಡಿದ ಪ್ರಿಯ ಮೇಕಪ್ ಆರ್ಟಿಸ್ಟ್ ಹೊನ್ನೆ ಗೌಡ್ರು ಇಂದು ಅಗಲಿದ ಸುದ್ದಿ ನಮ್ಮೆಲ್ಲರನ್ನು ಶೋಕದಲ್ಲಿ ಮುಳುಗಿಸಿದೆ. ಅವರ ಕಲೆ, ನಿಷ್ಠೆ ಮತ್ತು ನಗುಮೊಗದ ಸೇವೆಯನ್ನು ಎಂದಿಗೂ ಮರೆಯಲಾಗದು. ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬಕ್ಕೆ ನೋವನ್ನು ನುಂಗುವ ಶಕ್ತಿ ನೀಡಲಿ. ಹೊನ್ನೆ ಗೌಡರ ಆತ್ಮಕ್ಕೆ ಶಾಂತಿ ದೊರೆಯಲಿ. ಓಂ ಶಾಂತಿ’ ಎಂದು ನಟ ದರ್ಶನ್ ಪೋಸ್ಟ್ ಮಾಡಿದ್ದಾರೆ.

ದರ್ಶನ್ ಅವರ ಬಹುತೇಕ ಸಿನಿಮಾಗಳಿಗೆ ಹೊನ್ನೆ ಗೌಡ ಅವರೇ ಮೇಕಪ್ ಆರ್ಟಿಸ್ಟ್ ಆಗಿದ್ದರು. ಆ ದಿನಗಳನ್ನು ದರ್ಶನ್ ಈಗ ನೆನಪಿಸಿಕೊಂಡಿದ್ದಾರೆ. ಹೊನ್ನೆ ಗೌಡ ಅವರ ಕೆಲಸದ ವೈಖರಿಯನ್ನು ದರ್ಶನ್ ಅವರು ಸ್ಮರಿಸಿದ್ದಾರೆ. ಹೊನ್ನೆಗೌಡ ಅವರ ನಿಧನಕ್ಕೆ ಚಿತ್ರರಂಗದ ಹಲವರು ಕಂಬನಿ ಮಿಡಿದಿದ್ದಾರೆ.


Spread the love

LEAVE A REPLY

Please enter your comment!
Please enter your name here