ಚೆನ್ನೈ ಸೂಪರ್ ಕಿಂಗ್ಸ್ ಜೊತೆಗಿನ ಅಂತಿಮ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ 6 ವಿಕೆಟ್ಗಳಿಂದ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಗೆಲುವಿನೊಂದಿಗೆ ರಾಜಸ್ಥಾನ ತಂಡ, ಸೀಸನ್ 18ಕ್ಕೆ ವಿದಾಯ ಹೇಳಿದೆ. ಇದರ ನಡುವೆ ಪಂದ್ಯ ಗೆದ್ದ ಬಳಿಕ ಉಭಯ ತಂಡದ ಆಟಗಾರರು ಅಭಿನಂದಿಸುತ್ತಾ ಮೈದಾನದಲ್ಲಿ ಹೆಜ್ಜೆ ಹಾಕಿದ್ದರು.
ಈ ವೇಳೆ ವೈಭವ್ ಸೂರ್ಯವಂಶಿ ಎಂ ಎಸ್ ಧೋನಿ ಎದುರಿಗೆ ಬರುತ್ತಿದ್ದಂತೆ ಅವರ ಕಾಲಿಗೆ ಬಿದ್ದು ನಮಸ್ಕರಿಸುತ್ತಾನೆ. ಇದಕ್ಕೆ ಧೋನಿ ಬೆನ್ನು ತಟ್ಟಿ ವೆಲ್ ಪ್ಲೇಯ್ಡ್ ಎಂಬಂತೆ ಹುರಿದುಂಬಿಸಿ ಕಳಿಸುತ್ತಾರೆ. ಸದ್ಯ ವೈಭವ್ ಸೂರ್ಯವಂಶಿಯ ಈ ನಡೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಾ ಇದೆ.
https://twitter.com/AapkaAkash05/status/1924887290125681052
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡ, ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ, ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್ ಗಳಲ್ಲಿ ಎಂಟು ವಿಕೆಟ್ ಕಳೆದುಕೊಂಡು 187 ರನ್ ಕಲೆ ಹಾಕಿತು.
ಗೆಲುವಿಗೆ 188ರನ್ ಗಳ ಬೃಹತ್ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡ, ವೈಭವ್ ಸೂರ್ಯವಂಶಿ ಅವರ ಅಬ್ಬರದ ಅರ್ಧ ಶತಕದ ನೆರವಿನಿಂದ 17.1 ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 188 ರನ್ ಗಳಿಸುವ ಮೂಲಕ ಆರು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತು.









