ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡ ಸಾಹಿತಿ ಬಾನು ಮುಷ್ತಾಕ್!

0
Spread the love

ಲಂಡನ್:– ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಕನ್ನಡದ ಹೆಸರಾಂತ ಹಿರಿಯ ಸಾಹಿತಿ ಹಾಗೂ ಹಾಸನ ಮೂಲದ ಬಾನು ಮುಷ್ತಾಕ್ ಭಾಜನರಾಗಿದ್ದಾರೆ. ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಎಂಬ ಹೆಗ್ಗಳಿಕೆಗೆ ಬಾನು ಮುಷ್ತಾಕ್ ಪಾತ್ರರಾಗಿದ್ದಾರೆ. ‘ಹಾರ್ಟ್ ಲ್ಯಾಂಪ್’ ಎಂಬ ಕೃತಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ.

Advertisement

ಮಂಗಳವಾರ ಇಂಗ್ಲೆಂಡ್​ನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರಶಸ್ತಿಯು ಅಂದಾಜು 57.28 ಲಕ್ಷ ರೂ. ನಗದು ಒಳಗೊಂಡಿದೆ. ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿರುವ ಮುಷ್ತಾಕ್, ತಮ್ಮ ಗೆಲುವನ್ನು ವೈವಿಧ್ಯತೆಗೆ ದೊರೆತ ಜಯ ಎಂದು ಬಣ್ಣಿಸಿದ್ದಾರೆ. ‘ಯಾವ ಕಥೆಯೂ ಸಣ್ಣದಲ್ಲ, ಅನುಭವದ ವಸ್ತ್ರದಲ್ಲಿನ ಪ್ರತಿ ಎಳೆಯೂ ಇಡೀ ಕಥೆಯ ತೂಕವನ್ನು ಹೊಂದಿರುತ್ತದೆ ಎಂಬ ನಂಬಿಕೆಯಿಂದಲೇ ಈ ಪುಸ್ತಕ ರೂಪುಗೊಂಡಿತು’ ಎಂದು ಹೇಳಿದ್ದಾರೆ. ‘ನನ್ನ ಸುಂದರವಾದ ಭಾಷೆಗೆ ದೊರೆತ ಎಂತಹ ಸೊಗಸಾದ ಗೆಲುವು ಇದು’ ಎಂದು ಅನುವಾದಕಿ ಭಸ್ತಿ ಹರ್ಷ ವ್ಯಕ್ತಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here