ಕೋಲಾರ – ನಗರದ ಗಾಂಧಿನಗರದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಜರುಗಿದೆ. ಕೆಎಸ್ ಆರ್ ಟಿಸಿ ಬಸ್ ಗೆ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
Advertisement
21 ವರ್ಷದ ಚೇತನ ಮೃತ ಯುವಕ. ವೃತ್ತಿಯಲ್ಲಿ ಫೋಟೋ ಗ್ರಾಫರ್ ಆಗಿರುವ ಯುವಕ, ಹೆಚ್ ಕ್ರಾಸ್ ನಲ್ಲಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಆಗುವ ವೇಳೆ ಈ ದುರ್ಘಟನೆ ನಡೆದಿದೆ. ಕೂಡಲೇ ಸ್ಥಳಕ್ಕೆ ಕೋಲಾರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.