ವಿಜಯಸಾಕ್ಷಿ ಸುದ್ದಿ, ಗದಗ: ಮನೋರಮಾ ಕಾಲೇಜಿನ ಬಿಕಾಂ, ಬಿಬಿಎ, ಬಿಸಿಎ ವಿದ್ಯಾರ್ಥಿಗಳಿಗೆ ಬಂಡವಾಳ ಹೂಡಿಕೆ ಜಾಗೃತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಎನ್.ಎಸ್.ಇ ತರಬೇತುದಾರರಾದ ನಂದನ ಗುಲಾಲದ ಆಗಮಿಸಿ ಮಾತನಾಡಿ, ವಿದ್ಯಾರ್ಥಿಗಳು ಸರ್ಕಾರಿ ನೌಕರಿಗೆ ಅವಂಬಿತರಾಗದೆ ವ್ಯವಹಾರಿಕ ಜ್ಞಾನ ಬೆಳೆಸಿಕೊಂಡು ಬಂಡವಾಳ ಹೂಡಿಕೆ ಮಾಡಿ ಸ್ವಂತ ಉದ್ಯೋಗ ಮಾಡಿ ಬದುಕು ಕಟ್ಟಿಕೊಳ್ಳಿ ಎಂದರು.
ಪ್ರಾಚಾರ್ಯ ಬಿ.ಎಸ್. ಹಿರೇಮಠ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದೊಂದಿಗೆ ರಚನಾತ್ಮಕ ಕಾರ್ಯಾಗಾರದಲ್ಲಿ ಪಾಲ್ಗೊಂಡು ಉತ್ತಮ ವ್ಯವಹಾರಿಕ ಜ್ಞಾನ ಪಡೆದು ಯಶಸ್ಸಿನ ಮಾರ್ಗದ ಕಡೆಗೆ ನಡೆಯಿರಿ ಎಂದರು.
ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಚೇರಮನ್ ಎನ್.ಎಮ್. ಕುಡತರಕರ ವಹಿಸಿದ್ದರು. ಕಾರ್ಯದರ್ಶಿ ಮಂಜುನಾಥ ಕುಡತರಕರ, ಆಡಳಿತಾಧಿಕಾರಿ ಕಿಶೋರ ಮುದಗಲ್ಲ, ಸಂಸ್ಥೆಯ ನಿರ್ದೇಶಕರಾದ ಸಂಜಯ ಕುಡತರಕರ, ಚೇತನ ಕುಡತರಕರ ಹಾಗೂ ಸಂಯೋಜಕರುಗಳಾದ ಪ್ರೊ. ಅಲ್ವಿನಾ ಡಿ, ಪ್ರೊ. ಸವಿತಾ ಪೂಜಾರ, ಪ್ರೊ. ಚೈತ್ರಾ ಡಿ, ಪ್ರೊ. ಶಾಹೀದಾ ಶಿರಹಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.



