ವಿಜಯಸಾಕ್ಷಿ ಸುದ್ದಿ, ಗದಗ: ಗುರುವಾರ ಗದುಗಿಗೆ ಆಗಮಿಸಿದ್ದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಶುಕ್ರವಾರ ಉದ್ಘಾಟನೆಗೊಳ್ಳಲಿರುವ ಸಂಕನೂರ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿಗೆ ಭೇಟಿ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಂಪೂರ್ಣ ಕಟ್ಟಡವನ್ನು ವೀಕ್ಷಿಸಿದ ಸಚಿವರು, ಇದೊಂದು ಮಾದರಿಯ ನರ್ಸಿಂಗ್ ಕಾಲೇಜಾಗಿ ನಿರ್ಮಾಣಗೊಂಡಿದೆ ಎಂದು ಸಂತೋಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷರಾದ ವಿಧಾನ ಪರಿಷತ್ ಸದಸ್ಯರಾದ ಎಸ್.ವ್ಹಿ.ಸಂಕನೂರ, ಸಂಕನೂರ ಇನ್ಸಟಿಟ್ಯೂಟ್ ಆಫ್ ನರ್ಸಿಂಗ್ನ ಉಪಾಧ್ಯಕ್ಷ ಡಾ. ಪ್ರಕಾಶ ಸಂಕನೂರ, ಆಡಳಿತ ಮಂಡಳಿ ಸದಸ್ಯರಾದ ಡಾ. ಶ್ವೇತಾ ಸಂಕನೂರ, ನಿವೃತ್ತ ಪ್ರಾಧ್ಯಾಪಕ ಸುಭಾಸ ಸಂಕನೂರ ಅವರನ್ನು ಅಭಿನಂದಿಸಿ ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಕರು ಹಾಗೂ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸಂಸ್ಥೆಯಿಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವರೂ ಹಾಲಿ ಶಾಸಕರೂ ಆದ ಸಿ.ಸಿ. ಪಾಟೀಲ, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಬಿಜೆಪಿ ಮುಖಂಡ ಭರತ್ ಬೊಮ್ಮಾಯಿ, ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರಡಗಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.



