ಬೆಂಗಳೂರು: ಜಗತ್ತಿಗೆ ಬಿಟ್ಟು ಬಿಡದಂತೆ ಕಾಡಿದ ಕೊರೊನಾ ಕರಿನರೆಳು ಇನ್ನೂ ದೂರವಾಗಿಲ್ಲ. ಭಾರತದಲ್ಲಿ ಪ್ರಸ್ತುತ ಕೊರೊನಾ ಸೋಂಕಿತ ಪ್ರಕರಣಗಳು ನಿಯಂತ್ರಣದಲ್ಲಿದೆ. ಅದಲ್ಲದೆ ರಾಜ್ಯದಲ್ಲಿ ಸದ್ದಿಲ್ಲದೇ ಕೊರೋನಾ ಎಂಟ್ರಿ ಕೊಟ್ಟಿದೆ. ಮಳೆ ನಡುವೆ ಮತ್ತೆ ಆತಂಕ ಸೃಷ್ಟಿಸುವ ಸಾಧ್ಯಗಳು ಕಾಣುತ್ತಿವೆ.
ಹೌದು ವಾಣಿ ವಿಲಾಸ ಆಸ್ಪತ್ರೆಗೆ ದಾಖಲಾಗಿದ್ದ 9 ತಿಂಗಳ ಮಗುವಿನಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದ ಮಗುವನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಬಳಿಕ ಮಗುವನ್ನು ವಾಣಿ ವಿಲಾಸ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.
ಇದೀಗ ಮಗುವಿಗೆ ಕೋವಿಡ್ ಸೋಂಕು ತಗುಲಿರುವುದು ದೃಢವಾಗಿದೆ ಎಂದು ತಿಳಿದು ಬಂದಿದೆ. ಮಗುವಿನಲ್ಲಿ ಸೋಂಕು ಪತ್ತೆಯಾದ ಬೆನ್ನಲ್ಲೇ ಕೋವಿಡ್ ಮಾನಿಟರ್ ಮಾಡಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಈ ಬಗ್ಗೆ ಕೇಂದ್ರದಿಂದ ಯಾವುದೇ ಗೈಡ್ ಲೈನ್ಸ್ ಬಂದಿಲ್ಲ. ಜನ ಆತಂಕಪಡುವ ಅಗತ್ಯ ಇಲ್ಲ ಎಂದು ಸಚಿವರು ಹೇಳಿದ್ದಾರೆ.