HomeKarnataka NewsHDK ರಾಮನಗರ ಜಿಲ್ಲೆ ಸೃಜಿಸುವಾಗ, ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ.?: ಸಿಎಂ ಸಿದ್ದರಾಮಯ್ಯ ಪ್ರಶ್ನೆ

HDK ರಾಮನಗರ ಜಿಲ್ಲೆ ಸೃಜಿಸುವಾಗ, ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ.?: ಸಿಎಂ ಸಿದ್ದರಾಮಯ್ಯ ಪ್ರಶ್ನೆ

For Dai;y Updates Join Our whatsapp Group

Spread the love

ಮೈಸೂರು: ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಮೂಲಕ ಜಿಲ್ಲೆಯ ಇತಿಹಾಸವನ್ನು ತಿರುಚಲಾಗುತ್ತಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರು ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅಲ್ಲಿನ ಜನರ ಜನಾಭಿಪ್ರಾಯವನ್ನು ಪಡೆದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ಸೃಜಿಸುವಾಗ, ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ ಎಂದು ಮರುಪ್ರಶ್ನಿಸಿದರು.

ಇ.ಡಿ ಹಾಗೂ ಐ.ಟಿ ದಾಳಿಗಳು ರಾಜಕೀಯ ಪ್ರೇರಿತವಾಗಬಾರದು

ಜಾರಿನಿರ್ದೇಶನಾಲಯ ತನ್ನ ಎಲ್ಲೆಯನ್ನು ಮೀರುತ್ತಿರುವ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಗಮನಿಸಿರುವ ಕುರಿತು ಪತ್ರರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಇ.ಡಿ ಯವರು, ಐ.ಟಿ.ಯವರು ತನಿಖೆ ಮಾಡುವುದನ್ನೇ ಆಗಲಿ ಅಥವಾ ಕಪ್ಪು ಹಣ ವ್ಯವಹಾರವನ್ನು ಪತ್ತೆ ಹಚ್ಚುವುದನ್ನೇ ಆಗಲಿ ಆಕ್ಷೇಪಿಸುವುದಿಲ್ಲ. ಆದರೆ ಇ.ಡಿ ಮತ್ತು ಐ.ಟಿ ದಾಳಿಗಳು ರಾಜಕೀಯ ದುರುದ್ದೇಶದಿಂದ ನಡೆಯಕೂಡದು. ಪ್ರಸ್ತುತ ಗೃಹ ಸಚಿವ ಜಿ.ಪರಮೇಶ್ವರ ಅವರ ಶಿಕ್ಷಣ ಸಂಸ್ಥೇಯ ಮೇಲೆ ಇ.ಡಿ.ದಾಳಿ ರಾಜಕೀಯ ಪ್ರೇರಿತ. ಸುಪ್ರೀಂ ಕೋರ್ಟ್ ನವರು ಯಾವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ರೀತಿ ಅವಲೋಕಿಸಿದ್ದಾರೆ ಎಂದು ತೀರ್ಪು ಪರಿಶೀಲಿಸಿದ ನಂತರವಷ್ಟೇ ತಿಳಿಯಲಿದೆ ಎಂದರು.

ಒಂದು ವರ್ಷದಿಂದ ಅಪರಾಧ ಪ್ರಕರಣಗಳು ಕಡಿಮೆಯಿದೆ

ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ, ಅಪರಾಧ ಪ್ರಕರಣಗಳ ವಿರುದ್ಧ ಕಠಿಣ ಕ್ರಮವಾಗುತ್ತದೆ. ಆದರೆ ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದ್ದು, ಬಿಜೆಪಿ ಅವಧಿಗೆ ಹೋಲಿಸಿದರೆ ನಮ್ಮ ಸರ್ಕಾರದ ಅವಧಿಯಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಿದೆ. ಅಪರಾಧಗಳನ್ನು ಗಮನಾರ್ಹವಾಗಿ ಕಡಿಮೆ ಮಾಡಲು ಸರ್ಕಾರ ಖಂಡಿತ ಪ್ರಯತ್ನಿಸುತ್ತದೆ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!