ವಿಜಯಸಾಕ್ಷಿ ಸುದ್ದಿ, ಗದಗ: ಬಳ್ಳಾರಿ ಜಿಲ್ಲೆ, ಸಂಡೂರು ತಾಲೂಕಿನ ತಾಳೂರು ಗ್ರಾಮದ ನಕ್ಷತ್ರ ಸಾಹಿತ್ಯ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ರಾಷ್ಟçಮಟ್ಟದ ನಕ್ಷತ್ರಗಳ ಸಂಭ್ರಮ ಕಾರ್ಯಕ್ರಮವನ್ನು ಮೇ. 25ರಂದು ವಿಶ್ವರತ್ನತ್ರಯರ ವೇದಿಕೆ ತಾಳೂರು ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
Advertisement
ಈ ಕಾರ್ಯಕ್ರಮದಲ್ಲಿ ಗದುಗಿನ ಕಲಾವಿದೆ ಡಾ. ಪದ್ಮಾ ಜೆ.ಕಬಾಡಿ ಅವರು ಸಾಹಿತ್ಯ, ಸಂಗೀತ ಕ್ಷೇತ್ರದಲ್ಲಿ ಮಾಡುತ್ತಿರುವ ಸೇವೆಯನ್ನು ಗುರುತಿಸಿ ಅವರಿಗೆ `ಸಾಹಿತ್ಯ ನವಚೇತನ ರಾಷ್ಟ್ರ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು ಎಂದು ವಕೀಲರು ಹಾಗೂ ಸಂಸ್ಥಾಪಕ ಅಧ್ಯಕ್ಷರಾದ ಡಾ. ಷಣ್ಮುಖ ಸ್ವಾಮಿ ಕಡ್ಡಿಪುಡಿ ಅವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.