ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಸಿದ್ಧತೆ ಪರಿಶೀಲನೆ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮೇ.26ರಿಂದ ಪ್ರಾರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಉಪನಿರ್ದೇಶಕ ಆರ್.ಎಸ್. ಬುರಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಈ ವೇಳೆ ಮಾತನಾಡಿದ ಡಿಡಿಪಿಐ ಆರ್.ಎಸ್. ಬುರಡಿ, ಪಟ್ಟಣದಲ್ಲಿ ಒಟ್ಟು ಎರಡು ಪರೀಕ್ಷಾ ಕೇಂದ್ರಗಳಿದ್ದು, ಶ್ರೀ ಉಮಾ ವಿದ್ಯಾಲಯ ಪುರಸಭೆ ಹೈಸ್ಕೂಲ್ ಮತ್ತು ತಾಯಿ ಪಾರ್ವತಿ ಮಕ್ಕಳ ಬಳಗದ ಪ್ರೌಢಶಾಲೆಯಲ್ಲಿ ಪರೀಕ್ಷೆಗಳು ನಡೆಯಲಿವೆ. ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ತಾಲೂಕುಗಳಲ್ಲಿ ಸುಮಾರು 20 ಪರೀಕ್ಷಾ ಕೇಂದ್ರಗಳನ್ನು ಮಾಡಲಾಗಿದ್ದು, ಸುಮಾರು 5680 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಮೊದಲಿನಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಿಗೆ ಅವಶ್ಯಕ ಸೌಲಭ್ಯಗಳನ್ನು ಒದಗಿಸುವದು ಮತ್ತು ಕಟ್ಟುನಿಟ್ಟಿನ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಅವಶ್ಯಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅವಶ್ಯಕ ಸಿಬ್ಬಂದಿಗಳನ್ನು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದ್ದು, ಸುಸೂತ್ರವಾಗಿ ಪರೀಕ್ಷೆಗಳು ನಡೆಯುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ್, ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ, ಮುಖ್ಯೋಪಾಧ್ಯಯರಾದ ಜೆ.ಡಿ. ಲಮಾಣಿ, ಎಸ್.ಎಚ್. ಪೂಜಾರ ಮುಂತಾದವರು ಇದ್ದರು.


Spread the love

LEAVE A REPLY

Please enter your comment!
Please enter your name here