ಮಳೆ ಆರ್ಭಟ: ಬೆಂಗಳೂರು-ಮಂಗಳೂರು ರಸ್ತೆ ಕುಸಿತ, ಸವಾರರಿಗೆ ಹೆಚ್ಚಾಯ್ತು ಆತಂಕ!

0
Spread the love

ಹಾಸನ:- ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಇಲ್ಲಿನ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡು ಕಡೆ ಭೂ ಕುಸಿತ ಉಂಟಾಗಿದೆ. ಬೆಂಗಳೂರು ಟು ಮಂಗಳೂರು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರಸ್ತೆಗೆ ಮಣ್ಣು ಕುಸಿಯುತ್ತಿದೆ.

Advertisement

ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಸಕಲೇಶಪುರ ತಾಲೂಕಿನ ದೋಣಿಗಾಲ್ ಮತ್ತು ಅಡ್ಡನಗುಡ್ಡದ ಬಳಿ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡು ಕಡೆ ಭೂ ಕುಸಿತ ಉಂಟಾಗಿದೆ. ವಾಹನ‌ ಸವಾರರಲ್ಲಿ ಆತಂಕ ಶುರುವಾಗಿದೆ.

ತಡೆಗೋಡೆ ನಿರ್ಮಿಸಿದ್ದರು ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮಣ್ಣು ಕುಸಿಯುತ್ತಿದೆ. ಹೀಗಾಗಿ ಮರಗಳು ನೆಲಕ್ಕೆ ಉರುಳುತ್ತಿದ್ದು, ಅಪಾರ ಮೌಲ್ಯದ ಕಾಫಿ ಬೆಳೆ ನಾಶವಾಗಿದೆ. ಇನ್ನು ವೀಕೆಂಡ್ ಹಿನ್ನೆಲೆ ಶಿರಾಡಿಘಾಟ್​ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಳವಾಗಿದೆ. ಆದರೆ ಭೂ ಕುಸಿತದಿಂದ ವಾಹನ ಸವಾರರು ಎಚ್ಚರಿಕೆಯಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.


Spread the love

LEAVE A REPLY

Please enter your comment!
Please enter your name here