ಬೆಂಗಳೂರು:- ನಗರದಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನತೆಯನ್ನು ಆತಂಕಕ್ಕೆ ಒಳಗಾಗುವಂತೆ ಮಾಡಿದೆ.
Advertisement
ಮೊನ್ನೆ ತಾನೇ ನಗರದಲ್ಲಿ ಕೊರೊನಾ ಸೋಂಕಿಗೆ ಓರ್ವ ಸಾವನ್ನಪ್ಪಿ, ಇಬ್ಬರಿಗೆ ಸೋಂಕು ಧೃಡಪಟ್ಟಿತ್ತು. ಇದೀಗ ಮತ್ತೆ ಮೂರು ಜನರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಬೆಂಗಳೂರಿನ ಮೂರು ಏರಿಯಾಗಳಾದ ಡಿಜೆಹಳ್ಳಿ, ಸಿವಿರಾಮನ್ ನಗರ ಹಾಗೂ ಜೈ ಭುವನೇಶ್ವರಿ ನಗರದಲ್ಲಿ ಕೊರೊನಾ ಕಾಣಿಸಿಕೊಂಡಿದ್ದು, ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷನಿಗೆ ಕೊರೊನಾ ಪಾಸಿಟಿವ್ ಆಗಿದೆ.
ಮೂವರಿಗೂ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದೇ ಕೋವಿಡ್ ಕಾಣಸಿಕೊಂಡಿದ್ದು. ಸದ್ಯ ಹೋಂ ಐಸೋಲೇಷನ್‌ನಲ್ಲಿ ಟ್ರೀಟ್‌ಮೆಂಟ್ ತೆಗೆದುಕೊಳ್ಳುತ್ತಿದ್ದಾರೆ. ಇನ್ನೂ ಕರ್ನಾಟಕ ಸೇರಿ ದೇಶದಾದ್ಯಂತ ಮತ್ತೆ ಕೊರೊನಾ ಹಾವಳಿ ಹೆಚ್ಚಾಗಿದ್ದು, ದೇಶದ ಹಲವೆಡೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ.