ಬಳ್ಳಾರಿ: ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಜೈಸಿಂಗಪುರ ಬಳಿ ನಡೆದಿದೆ. ಆಶಾ (28), ಜಯಲಕ್ಷ್ಮಿ (21), ಸ್ವಾತಿ (5) ಹಾಗೂ ಬಿಂಧುಶ್ರೀ (4) ಮೃತ ದುರ್ಧೈವಿಗಳಾಗಿದ್ದು,
ಕಾರು ಚಲಾಯಿಸ್ತಿದ್ದ ರಮೇಶ್ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಕೊಪ್ಪಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಡೂರಿನ ಜೈಸಿಂಗಪುರ ಬಳಿ ಮೈನಿಂಗ್ ಟಿಪ್ಪರ್ ಓವರ್ ಟೇಕ್ ಮಾಡಲು ಹೋಗಿ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು,
ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸಂಡೂರು ಪೊಲೀಸರು ದೌಡಾಯಿಸಿ, ಮೃತದೇಹಗಳನ್ನ ಸಂಡೂರು ತಾಲೂಕು ಆಸ್ಪತ್ರೆಗೆ ರವಾನಿಸಿದರು. ಆಸ್ಪತ್ರೆಗೆ ಮೃತದೇಹಗಳು ಬರ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.



