ಬೆಂಗಳೂರು:- ಹೆಂಡತಿಯನ್ನು ಕೊಲೆ ಮಾಡಿದ ಪತಿರಾಯ ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಪಟ್ಟಣದ ದೇವನಹಳ್ಳಿ ಮುಖ್ಯ ರಸ್ತೆಯಲ್ಲಿ ಜರುಗಿದೆ.
35 ವರ್ಷದ ಹೆಂಡತಿ ಸುಮಾ ಪತಿಯಿಂದ ಕೊಲೆಯಾದ ದುರ್ದೈವಿ. 40 ವರ್ಷದ ಶಾಮಣ್ಣ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಗಂಡ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಗಂಡ ಹೆಂಡತಿ ಕಲಹಕ್ಕೆ ಇಬ್ಬರು ಗಂಡು ಮಕ್ಕಳು ಅನಾಥರಾಗಿದ್ದಾರೆ. ವಿಜಯಪುರ ಪೋಲಿಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ.



