ದಿಢೀರನೆ ಬಿಕೆ ಹರಿಪ್ರಸಾದ್ ಮನೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ..!

0
Spread the love

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದಾರೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ ದಿಢೀರನೆ ಪ್ರಸಾದ್ ಮನೆಗೆ ಭೇಟಿ ನೀಡಿದರು.

Advertisement

ತಮ್ಮ ಮನೆಯ ಮೆಟ್ಟಿಲುಗಳ ಮೇಲೆ ಬೋಕೆ ಹಿಡಿದು ನಿಂತಿದ್ದ ಪ್ರಸಾದ್ ಮುಖ್ಯಮಂತ್ರಿಯವರನ್ನು ಬರಮಾಡಿಕೊಂಡರು.  ಸಾಮಾನ್ಯವಾಗಿ ಮುಖ್ಯಮಂತ್ರಿಯಾದವರು ಶಾಸಕರ, ಸಚಿವರ ಮನೆಗೆ ಹೋಗೋದಿಲ್ಲ,

ಅವರೆಲ್ಲ ಸಿಎಂರನ್ನು ಕಾಣಲು ಅಪಾಯಿಂಟ್ಮೆಂಟ್ ತೆಗೆದುಕೊಂಡು ಬರುತ್ತಾರೆ. ಹಾಗಾಗಿ, ಸಿದ್ದರಾಮಯ್ಯ ಪ್ರಸಾದ ಮನೆಗೆ ಭೇಟಿ ಅಚ್ಚರಿಗೆ ಕಾರಣವಾಗಿದೆ. ಇನ್ನೂ ಈ ವೇಳೆ ವಸತಿ ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here