ಪಂಜಾಬ್’ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: ಐವರು ಸಾವು, 30 ಮಂದಿಗೆ ಗಾಯ

0
Spread the love

ಪಂಜಾಬ್‌: ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಪೋಟದಲ್ಲಿ ಐವರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿರುವ ಘಟನೆ ಪಂಜಾಬ್‌ನ ಶ್ರೀ ಮುಕ್ತಸರ್ ಸಾಹಿಬ್ ಜಿಲ್ಲೆಯ ಲಂಬಿ ಕ್ಷೇತ್ರದ ಸಿಂಘೆ ವಾಲಾ-ಫರೀದ್‌ಕೋಟ್ ಕೋಟ್ಲಿ ರಸ್ತೆಯಲ್ಲಿ ನಡೆದಿದೆ.

Advertisement

ಸ್ಫೋಟದ ರಭಸಕ್ಕೆ ಎರಡು ಅಂತಸ್ತಿನ ಕಟ್ಟಡ ಕುಸಿದಿದೆ. ಅನೇಕ ಕಾರ್ಮಿಕರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. ಶ್ರೀ ಮುಕ್ತಸರ್ ಸಾಹಿಬ್‌ನ ಸಿಂಘಾವಲಿ-ಕೋಟ್ಲಿ ರಸ್ತೆಯಲ್ಲಿರುವ 2 ಅಂತಸ್ತಿನ ಪಟಾಕಿ ಕಾರ್ಖಾನೆ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಆದ್ರೆ ಸ್ಫೋಟಕಕ್ಕೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಲಂಬಿಯ ಉಪ ಪೊಲೀಸ್ ವರಿಷ್ಠಾಧಿಕಾರಿ ಜಸ್ಪಾಲ್ ಸಿಂಗ್ ಹೇಳಿದ್ದಾರೆ.

ಸದ್ಯ ಸ್ಥಳೀಯ ಪೊಲೀಸರು ಸೇರಿದಂತೆ ರಕ್ಷಣಾ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ. ಗಾಯಗೊಂಡವರನ್ನ ಬಟಿಂಡಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.


Spread the love

LEAVE A REPLY

Please enter your comment!
Please enter your name here