HomeIndia Newsಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ..!

ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ..!

For Dai;y Updates Join Our whatsapp Group

Spread the love

ನವದೆಹಲಿ: ಚಿಕ್ಕ ವಯಸ್ಸಿನಲ್ಲಿಯೇ ಐಪಿಎಲ್‌ಗೆ ಪ್ರವೇಶಿಸಿದ ವೈಭವ್, ಪ್ರಪಂಚದಾದ್ಯಂತ ಮನೆಮಾತಾಗಿದ್ದಾರೆ. ಇದಲ್ಲದೆ, ವೈಭವ್ ಐಪಿಎಲ್‌ನಲ್ಲಿ ಅತ್ಯಂತ ವೇಗದ ಸಮಯದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಗಳಿಸಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಟೀಮ್ ಇಂಡಿಯಾ ಪರ ಆಡುವ ಮತ್ತು ದೇಶವನ್ನು ಪ್ರತಿನಿಧಿಸುವ ಕನಸನ್ನು ನನಸಾಗಿಸಲು ಶ್ರಮಿಸುತ್ತಿರುವ ವೈಭವ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.

ಹೌದು ಸೂರ್ಯವಂಶಿ ಮತ್ತು ಅವರ ಪೋಷಕರಿಗೆ ಬಿಹಾರದ ಪಾಟ್ನಾ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗುವ ಅವಕಾಶ ಸಿಕ್ಕಿದೆ. ಈ ವೇಳೆ, ವೈಭವ್‌ ಮೋದಿಯವರ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದರು. ವೈಭವ್ ಜೊತೆಗಿನ ಫೋಟೋಗಳನ್ನು ಮೋದಿಯವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಅಲ್ಲದೇ, ವೈಭವ್‌ ಅವರ ಕ್ರಿಕೆಟ್ ಕೌಶಲ್ಯಕ್ಕೆ ದೇಶದೆಲ್ಲೆಡೆ ಮೆಚ್ಚುಗೆ ಸಿಕ್ಕಿದೆ. ಅವರ ಭವಿಷ್ಯದ ಪ್ರಯತ್ನಗಳಿಗೆ ನನ್ನ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ. ಈ ಋತುವಿನಲ್ಲಿ ಕೇವಲ ಏಳು ಪಂದ್ಯಗಳಲ್ಲಿ ವೈಭವ್‌ 252 ರನ್ ಗಳಿಸಿದ್ದಾರೆ. ಜೈಪುರದಲ್ಲಿ ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧ 35 ಎಸೆತಗಳಲ್ಲಿ ಶತಕ ಸಿಡಿಸಿ ಇತಿಹಾಸ ಸೃಷ್ಟಿಸಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!