ಮಂಗಳೂರು:- ಭಾರೀ ಮಳೆ ಹಿನ್ನೆಲೆ ದ.ಕ ಜಿಲ್ಲೆಯಾದ್ಯಂತ ಶನಿವಾರ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಧಾರಕಾರ ಮಳೆ ಹಿನ್ನೆಲೆ, ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಅಂಗನವಾಡಿಯಿಂದ ಫ್ರೌಡಶಾಲೆಯವರೆಗೆ ರಜೆ ಘೋಷಣೆ ಮಾಡಲಾಗಿದೆ.
ಇನ್ನೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ತಡರಾತ್ರಿ ಸುರಿದ ಮಳೆ ಆರ್ಭಟಕ್ಕೆ ಜನರು ನಲುಗಿ ಹೋಗಿದ್ದಾರೆ. ನಿರಂತರ ಮಳೆಗೆ ಜಲ ಪ್ರವಾಹ ಉಂಟಾಗಿದೆ. ನೂರಾರು ಮನೆಗಳಿಗೆ ನೀರು ನುಗ್ಗಿದೆ. ಹಲವೆಡೆ ಗುಡ್ಡ ಕುಸಿದಿದೆ. ಉಳ್ಳಾಲ, ಕಲ್ಲಾಪು, ಬಿಗಂಬಿಲ, ಪಿಲಾರ್, ತಲಪಾಡಿ, ಅಂಬಿಕಾರಸ್ತೆ, ಕೋಟೆಕಾರು, ಪಾವೂರು, ಹರೇಕಳದ ಜನರು ಹೈರಾಣಾಗಿದ್ದಾರೆ.
ಮಳೆಯಿಂದಾಗಿ ಜಿಲ್ಲೆಯಲ್ಲಿ ಒಂದೇ ದಿನ ಐವರು ಮೃತಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಮಳೆಯಾಗುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.