ರೋಷಾವೇಷ ಅಧಿಕಾರಿಗಳ ಮೇಲಲ್ಲ, ಸಚಿವ ಸಂಪುಟದ ಸದಸ್ಯರ ಮೇಲೆ ತೋರಿಸಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

0
Spread the love

ಬೆಂಗಳೂರು: ರೋಷಾವೇಷ ಅಧಿಕಾರಿಗಳ ಮೇಲಲ್ಲ, ಸಚಿವ ಸಂಪುಟದ ಸದಸ್ಯರ ಮೇಲೆ ತೋರಿಸಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ಬಡವನ ಕೋಪ ದವಡೆಗೆ ಮೂಲ ಎನ್ನುವಂತೆ ತಮ್ಮ ಕೋಪತಾಪ,

Advertisement

ರೋಷಾವೇಷ ಅಧಿಕಾರಿಗಳ ಮೇಲಲ್ಲ, ಸಚಿವ ಸಂಪುಟದ ಸದಸ್ಯರ ಮೇಲೆ ತೋರಿಸಿ. ನಿಮ್ಮ ಹತಾಶೆಯನ್ನು, ಅಸಹಾಯಕತೆಯನ್ನ ಅಧಿಕಾರಿಗಳ ಮೇಲಲ್ಲ ತಮ್ಮ ಮಾತಿಗೆ ನಯಾ ಪೈಸೆ ಬೆಲೆ ಕೊಡದ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಕ್ಲಾಸ್ ತೆಗೆದುಕೊಂಡು ನಿಮ್ಮ ದಮ್ಮು ತಾಕತ್ತು ತೋರಿಸಿ,

ತಾವು ಸಚಿವರಿಗೆ ನೀಡಿರುವ ನಿರ್ದೇಶಗಳಲ್ಲಿ ಯಾವುದಾದರೂ ಒಂದಾದರೂ ಪಾಲನೆ ಆಗುತ್ತಿದೆಯಾ? ಎಂದು ಪ್ರಶ್ನೆ ಮಾಡಿರುವ ಅಶೋಕ್, ತಿಂಗಳಲ್ಲಿ ಒಂದು ದಿನ ಜನತಾದರ್ಶನ ಮಾಡಿ ಎಂದರೂ ಮಾಡುತ್ತಿಲ್ಲ. ಜಿಲ್ಲಾ ಪ್ರವಾಸ ಮಾಡಿ ಜನರ ಸಮಸ್ಯೆ ಕೇಳಿ ಎಂದರೂ ಮಾಡುತ್ತಿಲ್ಲ. ಕನಿಷ್ಠ ಪಕ್ಷ ವಾರದಲ್ಲಿ ಮೂರು ದಿನ ಕಚೇರಿಯಲ್ಲಿ ಕುಳಿತು ಕೆಲಸ ಮಾಡಿ ಎಂದರೂ ಗುರುವಾರದ ಸಂಪುಟ ಸಭೆಗೆ ಬಿಟ್ಟರೆ ಬಹುತೇಕ ಸಚಿವರು ವಿಧಾನಸೌಧದತ್ತ ತಲೆಯೂ ಹಾಕುತ್ತಿಲ್ಲ ಎಂದಿದ್ದಾರೆ.

ನಿವೃತ್ತ ಅಧಿಕಾರಿಗಳನ್ನು ಹೊರ ಗುತ್ತಿಗೆ ಸೇವೆಯಿಂದ ತಕ್ಷಣ ಬಿಡುಗಡೆ ಮಾಡಿ ಎಂದರೂ ಬಿಡುಗಡೆ ಮಾಡಲಿಲ್ಲ. ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ನೀಡಿ ಎಂದರೂ ಯಾರೂ ತಲೆ ಕೆಡಿಸಿಕೊಂಡಿಲ್ಲ. ಇನ್ನೂ ಅನೇಕ ಜಿಲ್ಲೆಗಳಲ್ಲಿ ಕಳೆದ ವರ್ಷದ ಪರಿಹಾರ ವಿತರಣೆಯೇ ಬಾಕಿ ಇದೆ ಎಂದು ಕಿಡಿಕಾರಿದ್ದಾರೆ.

 


Spread the love

LEAVE A REPLY

Please enter your comment!
Please enter your name here