SSLCಯಲ್ಲಿ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPIಗಳಿಗೆ ನೋಟಿಸ್: ಸಿಎಂ ಸೂಚನೆ

0
Spread the love

ಬೆಂಗಳೂರು: SSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಜಿಲ್ಲೆಗಳ DDPIಗಳಿಗೆ ನೋಟಿಸ್ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದಾರಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವತಿಗೆ ಸೂಚನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನ ಸೌಧದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

Advertisement

ಈ ವೇಳೆ SSLC ಯಲ್ಲಿ‌ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಪಡೆದಿರುವ ಜಿಲ್ಲೆಗಳ DDPI ಗಳಿಗೆ ನೋಟಿಸ್ ನೀಡಬೇಕು, ನೋಟಿಸ್ ಗೆ ಕೊಟ್ಟ ಉತ್ತರ ಸಮರ್ಪಕ‌ ಅನ್ನಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವತಿಗೆ ಸೂಚನೆ ನೀಡಿದರು.

ಹಿಂದುಳಿದವರು, ದಲಿತರು, ಅಶಿಕ್ಷಿತರು ಇರುವ ಕಡೆ ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳು ಇರುತ್ತವೆ. ಇದನ್ನು ಸಮರ್ಪಕವಾಗಿ ತಡೆಯಬೇಕು ಎಂದು ನಿಮಗೆ ಅನ್ನಿಸಲ್ವಾ ಎಂದು ಸಿಎಂ ಅಧಿಕಾರಿಗಳಿಗೆ ಪ್ರಶ್ನಿಸಿದರು.

ಸರಿಯಾಗಿ ನಿಗಾ ವಹಿಸಿ, ವರದಿ ನೀಡದ PDO ಗಳು ರೆವಿನ್ಯೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚಿಸಿದರು. ಅಗತ್ಯ ಇರುವ ಕಡೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ಕಾನೂನು ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚಿಸಿದರು.


Spread the love

LEAVE A REPLY

Please enter your comment!
Please enter your name here