ಮಂಡ್ಯ: ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಆಯೋಜಿಸಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತಾಡಿದ ಅವರು,
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಉಲ್ಲೇಖಿಸುತ್ತಾ, ಸ್ಥಳೀಯ ಕಾಂಗ್ರೆಸ್ ನಾಯಕರ ಕುಮ್ಮಕ್ಕಿನಿಂದ ಸರ್ಕಾರವು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಬಂಧಿಸುತ್ತಿದೆ, ಕಾಂಗ್ರೆಸ್ ಸರ್ಕಾರದ ಅತಿರೇಕ ವರ್ತನೆಯನ್ನು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ಅವರಿಗೆ ಎಚ್ಚರಿಕೆ ನೀಡಿದ್ದೇನೆ ಎಂದು ಹೇಳಿದರು.
ಇನ್ನೂ ಕರಾವಳಿ ಪ್ರಾಂತ್ಯದಲ್ಲಿ ಪರಿಸ್ಥಿತಿ ಹತೋಟಿ ತಪ್ಪಿದರೆ ಅದಕ್ಕೆ ಮುಖ್ಯಮಂತ್ರಿ, ಗೃಹ ಸಚಿವ, ಪೊಲೀಸರು ಮತ್ತು ಸರ್ಕಾರವೇ ಕಾರಣ ಎಂದು ವಿಜಯೇಂದ್ರ ಹೇಳಿದರು.



