ಐಪಿಎಸ್ ಅಧಿಕಾರಿ ಡಿ.ರೂಪಾಗೆ ಎಡಿಜಿಪಿಯಾಗಿ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ!

0
Spread the love

ಬೆಂಗಳೂರು:– ಐಪಿಎಸ್ ಅಧಿಕಾರಿ ಡಿ.ರೂಪಾ ಅವರಿಗೆ ಎಡಿಜಿಪಿಯಾಗಿ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರೇಷ್ಮೆ ಮಾರುಕಟ್ಟೆ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಐಪಿಎಸ್ ಮಹಿಳಾ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರಿಗೆ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

2000ನೇ ಬ್ಯಾಚ್​ನ ಐಪಿಎಸ್ ಅಧಿಕಾರಿಯಾಗಿರುವ ರೂಪಾ ಅವರನ್ನು ಐಜಿಪಿಯಿಂದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕಿಯಾಗಿ ಸರ್ಕಾರವು ಮುಂಬಡ್ತಿ ನೀಡಿದೆ. ಮುಂದಿನ ಆದೇಶದವರೆಗೂ ಸದ್ಯ ಕಾರ್ಯನಿರ್ವಹಿಸುತ್ತಿರುವ ಹುದ್ದೆಯಲ್ಲಿ ಮುಂದುವರಿಯುವಂತೆ ಸೂಚಿಸಿದೆ. ಮುಂಬಡ್ತಿ ಸಂಬಂಧ ಕಳೆದ ತಿಂಗಳು ನ್ಯಾಯಾಲಯದ ಮೆಟ್ಟಿಲೇರಿದ್ದ ಡಿ.ರೂಪಾ ಅವರು, ನ್ಯಾಯವಾಗಿ ತಮಗೆ ಸಿಗಬೇಕಾದ ಬಡ್ತಿ ನೀಡುವ ಕುರಿತು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್​ನ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವು, “ಮುಂಬಡ್ತಿ ಸಂಬಂಧ ಹೊಸದಾಗಿ ಅರ್ಜಿ ಸಲ್ಲಿಸುವಂತೆ ರೂಪಾ ಅವರಿಗೆ ಸೂಚಿಸಿತ್ತು.​ ಇದೇ ವೇಳೆ, ಮನವಿ ಸಂಬಂಧ ಸರ್ಕಾರವು ಎಂಟು ವಾರಗಳಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು” ಎಂದು ಆದೇಶಿಸಿ ಅರ್ಜಿಯನ್ನು ಇತ್ಯರ್ಥಪಡಿಸಿತ್ತು. ಹೈಕೋರ್ಟ್​ನ ಗಡುವಿಗೆ ಮಣಿದ ಸರ್ಕಾರ ಡಿ. ರೂಪಾ ಅವರಿಗೆ ಮುಂಬಡ್ತಿ ನೀಡಿ ಆದೇಶ ಹೊರಡಿಸಿದೆ.


Spread the love

LEAVE A REPLY

Please enter your comment!
Please enter your name here