ಟ್ಯಾಂಕರ್ ಅಪಘಾತ: ಮೂವರು ಕಾರ್ಮಿಕರು ಸಾವು!

0
Spread the love

ಬೆಳಗಾವಿ:- ಟ್ಯಾಂಕರ್ ಅಪಘಾತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಇಟಗಿ ಕ್ರಾಸ್​ನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಜರುಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳಿ ಗ್ರಾಮದ ರಾಮಚಂದ್ರ ಜಾಧವ್ (45), ಮಗ ಮಹೇಶ್ ರಾಮಚಂದ್ರ ಜಾಧವ್ (18), ರಾಮಣ್ಣ ಅಲಿಯಾಸ್ ರಮೇಶ್ (38) ಮೃತ ದುರ್ದೈವಿಗಳು.

Advertisement

ಘಟನೆಯಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆದ್ದಾರಿ ಗಸ್ತು ಸಿಬ್ಬಂದಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತ ರಾಮಚಂದ್ರ ಪತ್ನಿ ಲಕ್ಷ್ಮೀಬಾಯಿ, ಅನುಶ್ರೀ, ಮೃತ ರಾಮಣ್ಣನ ಪತ್ನಿ ಭೀಮವ್ವ (55) ಎಂಬುವರಿಗೆ ಗಂಭೀರ ಗಾಯವಾಗಿದೆ. ಗಾಯಾಳು ಭೀಮವ್ವ ಅವರ ಎರಡೂ ಕಾಲುಗಳು ಕಟ್ ಆಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಿತ್ತೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಹೆಚ್ಚುವರಿ ಎಸ್‌ಪಿ ಆರ್.ಬಿ ಬಸರಗಿ ಕೂಡ ಭೇಟಿ ನೀಡಿ ಮಾಹಿತಿ ಪಡೆದರು. ಆಯಿಲ್ ಟ್ಯಾಂಕರ್ ಪಲ್ಟಿಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕ್ರೇನ್ ಮೂಲಕ ಟ್ಯಾಂಕರ್ ಮೇಲೆತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here