Glenn Maxwell: ಏಕದಿನ ಕ್ರಿಕೆಟ್‌’ಗೆ ನಿವೃತ್ತಿ ಘೋಷಿಸಿದ ಗ್ಲೆನ್ ಮ್ಯಾಕ್ಸ್‌ವೆಲ್..!

0
Spread the love

ಏಕದಿನ ಕ್ರಿಕೆಟ್​’ಗೆ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ನಿವೃತ್ತಿ ಘೋಷಣೆ ಮಾಡಿದ್ದಾರೆ. 2027ರ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗುವುದಿಲ್ಲ ಎಂಬುದು ಖಚಿತವಾಗುತ್ತಿದ್ದಂತೆ ಮ್ಯಾಕ್ಸ್​ವೆಲ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಆಸ್ಟ್ರೇಲಿಯಾ ತಂಡದ ಆಯ್ಕೆ ಸಮಿತಿ ಮುಖ್ಯ ಜಾರ್ಜ್​ ಬೈಲಿ ಜೊತೆ ಮಾತನಾಡಿದ್ದೇನೆ. ಈ ವೇಳೆ 2027ರ ಏಕದಿನ ವಿಶ್ವಕಪ್ ಬಗ್ಗೆ ಚರ್ಚಿಸಿದ್ದೆವು. ಅವರು 2027ರವರೆಗೆ ನನ್ನನ್ನು ತಂಡದಲ್ಲಿ ಮುಂದುವರೆಸುತ್ತಾರೆ ಎಂದು ಭಾವಿಸುತ್ತಿಲ್ಲ. ಹೀಗಾಗಿ ನನ್ನ ಸ್ಥಾನಕ್ಕೆ ಬೇರೆಯವನ್ನು ಆಯ್ಕೆ ಮಾಡಲು ಇದು ಸೂಕ್ತ ಸಮಯ. ಇದೇ ಕಾರಣದಿಂದ ನಿವೃತ್ತಿ ಘೋಷಿಸಿರುವುದಾಗಿ ಮ್ಯಾಕ್ಸ್​ವೆಲ್ ಹೇಳಿದ್ದಾರೆ.

ಆಸ್ಟ್ರೇಲಿಯಾ ಪರ ಈವರೆಗೆ 149 ಏಕದಿನ ಪಂದ್ಯಗಳನ್ನಾಡಿರುವ ಗ್ಲೆನ್ ಮ್ಯಾಕ್ಸ್​ವೆಲ್ 136 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 3149 ಎಸೆತಗಳನ್ನು ಎದುರಿಸಿರುವ ಅವರು ಒಟ್ಟು 3990 ರನ್ ಕಲೆಹಾಕಿದ್ದಾರೆ. ಇದರ ನಡುವೆ ಒಂದು ದ್ವಿಶತಕ ಹಾಗೂ 4 ಶತಕ ಮತ್ತು 23 ಅರ್ಧಶತಕಗಳನ್ನು ಬಾರಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here