ಕೊಪ್ಪಳ: ಸರ್ಕಾರ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಕೆಲವರನ್ನು ಓಲೈಕೆ ಮಾಡಲು ರಾಜ್ಯ ಸರ್ಕಾರ ಹೀಗೆ ಮಾಡುತ್ತಿದೆ. ತಪ್ಪಿತಸ್ಥರನ್ನು ಬಂಧಿಸಲು ನಮ್ಮ ಅಭ್ಯಂತರ ಇಲ್ಲ.
Advertisement
ಆದರೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ. ಟಾರ್ಗೆಟ್ ಮಾಡಿದರೆ ಅದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಕಿಡಿಕಾರಿದ್ದಾರೆ.
ಕರಾವಳಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕೆಟ್ಟು ಹೋಗಿದೆ. ಮೇಲಿಂದ ಮೇಲೆ ಕೊಲೆ ಪ್ರಕರಣಗಳು ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಸದ್ಯದ ರಾಜ್ಯ ಸರ್ಕಾರದ ನಡವಳಿಕೆಯಿಂದ ಮತ್ತಷ್ಟು ಸಮಸ್ಯೆ ಹೆಚ್ಚಾಗಲಿದೆ ಎಂದು ದೂರಿದ್ದಾರೆ.