ಬೆಂಗಳೂರು:- ನಾಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಐಪಿಎಲ್ 2025ರ ಫೈನಲ್ ಪಂದ್ಯ ನಡೆಯಲಿದೆ. ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸಾಕಷ್ಟು ಗಣ್ಯರು ಶುಭ ಕೋರಿದ್ದಾರೆ.
ಆರ್‌ಸಿಬಿ ತಂಡಕ್ಕೆ ಯಶಸ್ಸು ಸಿಗಲಿ – ಹೆಚ್ ಡಿ ಕುಮಾರಸ್ವಾಮಿ!
ಐಪಿಎಲ್ ಫೈನಲ್ ಪಂದ್ಯದ ಬಗ್ಗೆ ಮಾತನಾಡಿರುವ ಹೆಚ್ ಡಿ ಕುಮಾರಸ್ವಾಮಿ, ಅಭಿಮಾನಿಗಳಿಗೆ ಆರ್‌ಸಿಬಿ ಗೆಲ್ಲಬೇಕೆಂಬ ನಿರೀಕ್ಷೆ ಇದೆ. ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ತಂಡಕ್ಕೆ ಯಶಸ್ಸು ಸಿಗಲಿ ಎಂದು ಹಾರೈಸಿದ್ದಾರೆ.
ಆರ್ ಅಶೋಕ್ ಹೇಳಿದ್ದೇನು?
ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, ಹಲವಾರು ವರ್ಷಗಳ ನಂತರ ಆರ್‌ಸಿಬಿ ಫೈನಲ್‌ಗೆ ಬಂದಿದೆ. ಕಪ್ ಗೆಲ್ಲಲಿ ಎಂಬುದು ನಮ್ಮೆಲ್ಲರ ನಿರೀಕ್ಷೆಯಾಗಿದೆ. ಆರ್‌ಸಿಬಿಗೆ ಶುಭವಾಗಲಿ ಎಂದು ಹಾರೈಸಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಸಹ ಆರ್‌ಸಿಬಿ ಗೆಲುವಿಗೆ ಶುಭ ಹಾರೈಸಿದ್ದಾರೆ.
ಸಂಗೀತ ನಿರ್ದೇಶಕ ಹಂಸಲೇಖ ಮಾತನಾಡಿ, ಆರ್‌ಸಿಬಿ ಈ ಬಾರಿ ಐಪಿಎಲ್ ಮ್ಯಾಚ್ ಗೆದ್ದೇ ಗೆಲ್ಲುತ್ತೆ. ಈ ಹಿಂದೆ ತಪ್ಪು ಮಾಡಿದ್ದೇವೆ. ಈಗ ತಪ್ಪು ಆಗೋದಿಲ್ಲ, ಈ ಸಲ ಕಪ್ ನಮ್ಮದೇ ಎಂದಿದ್ದಾರೆ.
ಸಚಿವ ಶಿವರಾಜ್ ತಂಗಡಗಿ ಮಾತನಾಡಿ, ನಮ್ಮ ಕನ್ನಡದ ತಂಡ ಈ ಬಾರಿ ಕಪ್ ಗೆಲ್ಲುತ್ತೆ. ಈ ಸಲ್ ಕಪ್ ನಮ್ದೆ ಎಂದು ಜೋಶ್‌ನಿಂದ ಹೇಳಿಕೊಂಡಿದ್ದಾರೆ. ಇನ್ನೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನಾನು ಕಿಕೆಟ್‌ನ ದೊಡ್ಡ ಅಭಿಮಾನಿ, ಈ ಬಾರಿ ಫೈನಲ್‌ನಲ್ಲಿ ಆರ್‌ಸಿಬಿ ಆಟಗಾರರಿಗೆ ದೇವರು ಶಕ್ತಿ ಕೊಡಲಿ ಎಂದು ಪ್ರಾರ್ಥನೆ ಮಾಡ್ತೀನಿ. ಈ ಬಾರಿ ವಿರಾಟ್ ಕೊಹ್ಲಿ ಸೇರಿದಂತೆ ಎಲ್ಲರೂ ತುಂಬಾ ಚೆನ್ನಾಗಿ ಆಡಿದ್ದಾರೆ. ತಾಯಿ ಚಾಮುಂಡೇಶ್ವರಿಯಲ್ಲಿ ನಾನು ವಿಶೇಷ ಪ್ರಾರ್ಥನೆ ಮಾಡುತ್ತೇನೆ. ಈ ಸಲ ಕಪ್ ನಮ್ದೇ ಎಂದಿದ್ದಾರೆ.