ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾ ಬಿಡುಗಡೆ ವಿರೋಧಿಸಿ ಕನ್ನಡಿಗರು ಹೋರಾಟಕ್ಕೆ ಸಜ್ಜಾಗಿದ್ದಾರೆ. ಕನ್ನಡಿಗರ ಆಕ್ರೋಶಕ್ಕೆ ಸೊಪ್ಪು ಹಾಕದ ನಟ ಕಮಲ್ ಹಾಸನ್ ಅವರು ಈಗ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ನ್ಯಾ.ನಾಗಪ್ರಸನ್ನ ಪೀಠ ವಿಚಾರಣೆ ನಡೆಸಿದೆ. ಈ ವೇಳೆ ಕಮಲ್ ಹಾಸನ್ಗೆ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
‘ಸಿ. ರಾಜಗೋಪಾಲಚಾರಿ ಇದೇ ರೀತಿಯ ಹೇಳಿಕೆ ನೀಡಿದ್ದರು. ನಂತರ ಅವರು ಕ್ಷಮಾಯಾಚನೆ ಮಾಡಿದ್ದರು. ಆದರೆ ಕಮಲಹಾಸನ್ ಯಾವುದೇ ಕ್ಷಮಾಯಾಚನೆ ಮಾಡಿಲ್ಲ. ಅವರು ಸಿನಿಮಾ ಮಾಡಿರೋದು ವಾಣಿಜ್ಯ ಉದ್ದೇಶದಿಂದ. ಈಗ ತಪ್ಪು ಮಾಡಿದ್ದಾರೆ. ಅವರು ಮಾಡಿದ ತಪ್ಪಿಗೆ ಪೊಲೀಸರು ಭದ್ರತೆ ನೀಡಬೇಕೇ’ ಎಂದು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಪೀಠ ಕಮಲ್ ಅವರ ವಕೀಲರನ್ನು ತರಾಟೆಗೆ ತೆಗೆದುಕೊಂಡಿತು.
ಅದಲ್ಲದೆ ಒಂದು ಭಾಷೆಯಿಂದ ಇನ್ನೋಂದು ಭಾಷೆ ಹುಟ್ಟಿಲ್ಲ, ನೀವು ಇತಿಹಾಸಕಾರರ? ಜಡ್ಜ್ ಪ್ರಶ್ನಿಸಿದ್ದಾರೆ. ‘ನಿಮ್ಮ ಹೇಳಿಕೆಯಿಂದ ಶಿವರಾಜಕುಮಾರ್ ಸಮಸ್ಯೆ ಅನುಭವಿಸುವಂತಾಗಿದೆ. ನೀವು ನಿಮ್ಮ ಹೇಳಿಕೆಯನ್ನು ನಿರಾಕರಿಸಿಲ್ಲ, ಒಪ್ಪಿಕೊಂಡಿದ್ದೀರಾ.
ಆದರೆ ಕ್ಷಮೆಯಾಚನೆ ಮಾಡಲು ಸಿದ್ಧರಿಲ್ಲ. ಬೇರೆಯವರ ಭಾವನೆಗಳಿಗೆ ಧಕ್ಕೆ ತಂದು ಸಿನಿಮಾ ಬಿಡುಗಡೆ ಬಯಸುತ್ತಿದ್ದೀರಾ? 300 ಕೋಟಿ ರೂಪಾಯಿಯ ಸಿನಿಮಾ ಎನ್ನುತ್ತಿದ್ದೀರಾ, ಕ್ಷಮೆಯಾಚನೆ ಮಾಡಿ. ಆಗ ಸಮಸ್ಯೆಯೇ ಇರುವುದಿಲ್ಲ’ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.