ಬೆಂಗಳೂರು: ಪಾಳೇಗಾರಿಕೆಯನ್ನು ಹಂಗಿಸುವಂತೆ ರಾಜ್ಯದ ಕಾಂಗ್ರೆಸ್ ಸರ್ಕಾರವು ಅಧಿಕಾರ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ ಮಹಾರಾಜರು ಹಿಂದೆ ನಮ್ಮ ದೇಶವನ್ನು ಆಳಿದ್ದರು. ಆಗ ಪಾಳೇಗಾರರು ಇದ್ದ ಬಗ್ಗೆ ನಾವು ಕೇಳಿದ್ದೇವೆ.
ಆ ಪಾಳೇಗಾರಿಕೆಯನ್ನು ಹಂಗಿಸುವಂತೆ ರಾಜ್ಯದ ಕಾಂಗ್ರೆಸ್ ಸರ್ಕಾರವು ಅಧಿಕಾರ ನಡೆಸುತ್ತಿದೆ. ಪ್ರಜಾಪ್ರಭುತ್ವವನ್ನು ಹಂಗಿಸುವಂತೆ ಸಿದ್ದರಾಮಯ್ಯರ ನೇತೃತ್ವದ ಸರ್ಕಾರವು ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಕಳೆದ ಕೆಲವು ತಿಂಗಳಿನಿಂದ ಈ ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರದ ವರ್ತನೆಯನ್ನು ತಾವು ಗಮನಿಸಿ. ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತಿಲ್ಲವೆಂದು ಜನಾಕ್ರೋಶ ವ್ಯಕ್ತಪಡಿಸುತ್ತಿರುವ ಸಂದರ್ಭದಲ್ಲೇ ಮತ್ತೊಂದು ಕಡೆ ಸರ್ಕಾರದ ಹುಳುಕು ಮುಚ್ಚಿ ಹಾಕಿಕೊಳ್ಳಲು ಇಂಥ ಘಟನೆಗಳು ನಡೆಯುತ್ತಿವೆ. ಸರ್ಕಾರವು ಕೂಡ ಹಿಂದೂ ಕಾರ್ಯಕರ್ತರಿಗೆ ಅಪಮಾನ ಮಾಡಲು ಕುತಂತ್ರ ಮಾಡುತ್ತಿದೆ ಎಂದು ದೂರಿದ್ದಾರೆ.