HomeCrime NewsIPL 2025: ಸಂಭ್ರಮಾಚರಣೆ ನೆಪದಲ್ಲಿ RCB ಅಭಿಮಾನಿಗೆ ಚಾಕು ಇರಿತ!

IPL 2025: ಸಂಭ್ರಮಾಚರಣೆ ನೆಪದಲ್ಲಿ RCB ಅಭಿಮಾನಿಗೆ ಚಾಕು ಇರಿತ!

For Dai;y Updates Join Our whatsapp Group

ಬೆಂಗಳೂರು: ಅಹಮದಾಬಾದ್‌ನ ಶ್ರೀ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಗೆಲ್ಲುವ ಮೂಲಕ ಪಾಟೀದಾರ್ ನಾಯಕತ್ವದ ಆರ್‌ಸಿಬಿ, ಕಪ್ ಗೆದ್ದುಕೊಂಡಿದೆ. ಐಪಿಎಲ್ ಟ್ರೋಫಿ ಎತ್ತಿ ಹಿಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ರಾತ್ರಿಯಿಡೀ ಸಂಭ್ರಮಾಚರಣೆ ನೆರವೇರಿದೆ.

ಈ ಸಂದರ್ಭದಲ್ಲಿ ದುಷ್ಕರ್ಮಿಗಳ ಗುಂಪೊಂದು ಯುವಕನಿಗೆ ಚಾಕು ಇರಿದ ಘಟನೆ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ. ಸಂಭ್ರಮಾಚರಣೆ ಮಾಡುತ್ತಾ ದುಷ್ಕರ್ಮಿಗಳು ಬಾರ್‌ಗೆ ತೆರಳುತ್ತಿದ್ದರು. ಇದೇ ವೇಳೆ, ಯುವಕನಿಗೆ ಚಾಕುವಿನಿಂದ ಇರಿದಿದ್ದಾರೆ.

ಸ್ಥಳದಲ್ಲಿದ್ದವರ ಪ್ರತಿರೋಧದ ಬಳಿಕ ದುಷ್ಕರ್ಮಿಗಳು ಘಟನಾ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಕೂದಲೆಳೆ ಅಂತರದಲ್ಲಿ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹಲ್ಲೆಗೊಳಗಾದ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img