ಬೆಳಗಾವಿ: ಟ್ರೋಫಿ ಗೆದ್ದ ಖುಷಿಯಲ್ಲಿ RCB ಅಭಿಮಾನಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಜರುಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ನಲ್ಲಿ ಟ್ರೋಫಿ ಗೆದ್ದ ಹಿನ್ನೆಲೆ ಎಲ್ಲೆಡೆ ಸಂಭ್ರಮ ಜೋರಾಗಿದೆ. ಇತ್ತ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಕೂಡ ಸಂಭ್ರಮ ಮುಗಿಲು ಮುಟ್ಟಿತ್ತು.
ಈ ಸಂಭ್ರಮದಲ್ಲಿ ಭಾಗಿಯಾಗಿದ್ದ ಅಭಿಮಾನಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕುಣಿಯುತ್ತಿದ್ದ ವೇಳೆ ಕುಸಿದುಬಿದ್ದು ಮಂಜುನಾಥ್ ಕುಂಬಾರ(25) ಸಾವನ್ನಪ್ಪಿದ್ದಾರೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



