ಬೆಂಗಳೂರು:- ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ರಾಷ್ಟ್ರಪತಿ, PM ಮೋದಿ, ರಾಹುಲ್ ಗಾಂಧಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.
ಘಟನೆಗೆ ದ್ರೌಪದಿ ಮುರ್ಮು ವಿಷಾದ:
ಘಟನೆಗೆ ವಿಷಾದ ವ್ಯಕ್ತಪಡಿಸಿದ ದ್ರೌಪದಿ ಮುರ್ಮು, ಬೆಂಗಳೂರಿನ ಕ್ರೀಡಾಂಗಣದಲ್ಲಿ ನಡೆದ ದುರಂತ ಘಟನೆಯಲ್ಲಿ ಸಂಭವಿಸಿದ ಜೀವಹಾನಿ ಆಘಾತಕಾರಿ ಮತ್ತು ಹೃದಯವಿದ್ರಾವಕ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಇದು ಹೃದಯವಿದ್ರಾವಕ ಘಟನೆ: PM ಮೋದಿ!
ಬೆಂಗಳೂರಿನಲ್ಲಿ ನಡೆದಿರುವುದು ನಿಜಕ್ಕೂ ಹೃದಯವಿದ್ರಾವಕ ಘಟನೆ. ಈ ದುರಂತದಲ್ಲಿ ಹಲವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಅವರ ಬಗ್ಗೆ ಕನಿಕರವಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಜನರ ಸುರಕ್ಷತೆ ಮೊದಲ ಆದ್ಯತೆಯಾಗಬೇಕು: ರಾಹುಲ್ ಗಾಂಧಿ!
ಆರ್ಸಿಬಿಯ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ದುರಂತ ಹೃದಯವಿದ್ರಾವಕ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರೆಲ್ಲರೂ ಶೀಘ್ರವಾಗಿ ಮತ್ತು ಸಂಪೂರ್ಣವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುಃಖದ ಸಮಯದಲ್ಲಿ, ನಾನು ಬೆಂಗಳೂರಿನ ಜನರೊಂದಿಗೆ ನಿಲ್ಲುತ್ತೇನೆ. ಕರ್ನಾಟಕ ಸರ್ಕಾರವು ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ಬೆಂಬಲ ಮತ್ತು ಪರಿಹಾರವನ್ನು ಒದಗಿಸಬೇಕು. ಈ ದುರಂತವು ನೋವಿನ ಜ್ಞಾಪನೆಯಾಗಿದೆ. ಸಾರ್ವಜನಿಕ ಕಾರ್ಯಕ್ರಮಗಳಿಗೆ ಪ್ರತಿಯೊಂದು ಸುರಕ್ಷತಾ ಪ್ರೋಟೋಕಾಲ್ ಅನ್ನು ಪರಿಶೀಲಿಸಬೇಕು ಮತ್ತು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಜನರ ಸುರಕ್ಷತೆ ಮೊದಲ ಆದ್ಯತೆಯಾಗಬೇಕು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.