ರಾಯಚೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವಕ್ಕೆ ಸಾಗರೋಪಾದಿಯಲ್ಲಿ ಅಭಿಮಾನಿಗಳು ಕ್ರೀಡಾಂಗಣದ ಬಳಿ ಸೇರಿದ್ದರು. ಕಾಲಿಡಲು ಸ್ಥಳವಿಲ್ಲದಷ್ಟು ಜಾಗ ಬಿಡದ ಕಾಲ್ತುಳಿತ ಸಂಭವಿಸಿ ಅಭಿಮಾನಿಗಳು ಮೃತಪಟ್ಟಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯಿಸಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ರಾಜ್ಯದ ಜನರು ಆರ್ಸಿಬಿ ತಂಡವನ್ನು ಸ್ವಾಗತಿಸುವ ಸಂಭ್ರಮದಲ್ಲಿ ಇದ್ದರು. ಈ ಹಿನ್ನೆಲೆ ಸರ್ಕಾರ ಮುನ್ನೆಚ್ಚರಿಕೆ ವಹಿಸಿದ್ದರೂ ಲಕ್ಷಾಂತರ ಅಭಿಮಾನಿಗಳು ಬಂದಿದ್ದರಿಂದ ಎಡವಟ್ಟಾಗಿದೆ. ಸರ್ಕಾರವನ್ನೋ, ಪೊಲೀಸರನ್ನೋ ತಪ್ಪಿಸ್ಥರನ್ನಾಗಿ ಮಾಡುವುದಲ್ಲ. ಘಟನೆ ಆಗಿದೆ, ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಹೇಳಿದರು.