HomeBengaluru Newsಚಿನ್ನಸ್ವಾಮಿ ದುರಂತ: ಆರ್‌ಸಿಬಿ ಫ್ರಾಂಚೈಸಿ & ಕೆಎಸ್‌ಸಿಎ ವಿರುದ್ಧ FIR ದಾಖಲು!

ಚಿನ್ನಸ್ವಾಮಿ ದುರಂತ: ಆರ್‌ಸಿಬಿ ಫ್ರಾಂಚೈಸಿ & ಕೆಎಸ್‌ಸಿಎ ವಿರುದ್ಧ FIR ದಾಖಲು!

For Dai;y Updates Join Our whatsapp Group

Spread the love

ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಗೆ ಕಾರಣರಾದ ಆರ್‌ಸಿಬಿ ಫ್ರಾಂಚೈಸಿ & ಕೆಎಸ್‌ಸಿಎ ವಿರುದ್ಧ FIR ದಾಖಲಾಗಿದೆ.

ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ಮತ್ತು ಡಿಎನ್‌ಎ ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್‌ 105 (ಮಾನವ ನರಹತ್ಯೆ), BNS 106, 118(1), 118(2), 190, 132, 125A,125(B) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮೊದಲು ಯುಡಿಆರ್‌ ದಾಖಲಿಸಲಾಗಿತ್ತು, ಇದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಈ ಸಂಬಂಧ ಮಾಧ್ಯಮಗಳಲ್ಲಿ ವಿಸ್ತೃತವಾಗಿ ವರದಿ ಬಿತ್ತರಿಸಲಾಗಿತ್ತು. ಈ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್‌ ಇಲಾಖೆ ಎಫ್‌ಐಆರ್‌ ದಾಖಲಿಸಿದೆ.

ಘಟನೆ ವಿವರ:

ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿದೆ.

ಕಪ್ ಗೆದ್ದ ಖುಷಿಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಫ್ಯಾನ್ಸ್ ಹರಿದುಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್‌ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ಉಂಟಾಗಿ ದುರಂತ ಸಂಭವಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!