ಬೆಂಗಳೂರು:- ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಿಷನರ್ ದಯಾನಂದ್ ಸೇರಿ ಐವರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಸೀಮಂತ್ ಕುಮಾರ್ ಅವರನ್ನು ಬೆಂಗಳೂರಿನ ನೂತನ ಕಮಿಷನರ್ ಆಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಪೊಲೀಸ್ ಕಮಿಷನರ್ ಸೇರಿ 5 ಅಧಿಕಾರಿಗಳ ಅಮಾನತ್ತು ಬೆನ್ನಲ್ಲೇ ನೂತನ ಪೊಲೀಸ್ ಕಮಿಷನರ್ ಆಯ್ಕೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿತ್ತು. ಈ ಬಗ್ಗೆ ಸಿಎಂ ಮನೆಯಲ್ಲಿ ಮಹತ್ವದ ಚರ್ಚೆ ಕೂಡಾ ನಡೆದಿತ್ತು. ಇದೀಗ ಬೆಂಗಳೂರು ನೂತನ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
1996 ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದ ಸೀಮಂತ್ ಕುಮಾರ್, ಈ ಹಿಂದೆ ಬೆಂಗಳೂರು ಪೂರ್ವ ವಲಯ ಹೆಚ್ಚುವರಿ ಆಯುಕ್ತರಾಗಿ, ಎಸಿಬಿಯಲ್ಲಿ ಎಡಿಜಿಪಿಯಾಗಿ, ಕೆಎಸ್ಆರ್ ಪಿ ಎಡಿಜಿಪಿಯಾಗಿದ್ದ ಸೀಮಂತ್ ಕುಮಾರ್ ಕಾರ್ಯ ನಿರ್ವಹಿಸಿದ್ದರು. ಸದ್ಯ ಬಿಎಂಟಿಎಫ್ (ಬೆಂಗಳೂರು ಮಹಾನಗರ ಕಾರ್ಯಪಡೆ) ಎಡಿಜಿಪಿಯಾಗಿರುವ ಸೀಮಂತ್ ಕುಮಾರ್ ಸಿಂಗ್ ಇದೀಗ ಬೆಂಗಳೂರಿಗೆ ನೂತನ ಕಮಿಷನರ್ ಆಗಿ ಆಯ್ಕೆಯಾಗಿದ್ದಾರೆ.