ಚಿನ್ನಸ್ವಾಮಿ ದುರಂತ ಕೇಸ್: RCB, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಸಿದ್ದರಾಮಯ್ಯ ಸೂಚನೆ!

0
Spread the love

ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ RCB, ಕೆಎಸ್‌ಸಿಎ ಪ್ರತಿನಿಧಿಗಳ ಬಂಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ಕಾಲ್ತುಳಿತ ಪ್ರಕರಣದಲ್ಲಿ ಆರ್‌ಸಿಬಿ ಫ್ರಾಂಚೈಸಿ- ಎ1, ಡಿಎನ್‌ ಎಂಟರ್‌ಟೈನ್‌ಮೆಂಟ್‌ ಸಂಸ್ಥೆ ಎ2, ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯು ಎ3 ಆರೋಪವನ್ನು ಹೊತ್ತಿವೆ. ಕಬ್ಬನ್‌ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

Advertisement

ಪ್ರಕರಣ ಸಂಬಂಧ ಕೆಎಸ್‌ಸಿಎ, ಸಮಾರಂಭ ಆಯೋಜಿಸಿದ್ದ ಆರ್‌ಸಿಬಿ ಫ್ರಾಂಚೈಸಿ, ವಿಜಯೋತ್ಸವದ ವೇಳೆ ಭದ್ರತೆ ಹೊಣೆ ಹೊತ್ತಿದ್ದ ಡಿಎನ್‌ಎ ಈವೆಂಟ್‌ ಮ್ಯಾನೇಜ್‌ಮೆಂಟ್‌ಗೆ ನೋಟಿಸ್‌ ಜಾರಿ ಮಾಡಲಾಗಿದೆ.

ಘಟನೆ ಹಿನ್ನೆಲೆ:

ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತಕ್ಕೆ ಬುಧವಾರ 11 ಅಭಿಮಾನಿಗಳು ದಾರುಣ ಸಾವನ್ನಪ್ಪಿದರು. ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾಗರೋಪಾದಿಯಲ್ಲಿ ಜನ ನೆರೆದಿದ್ದರು. ಜನರಲ್ಲಿ ನೂಕುನುಗ್ಗಲಿಂದ ಕಾಲ್ತುಳಿತ ಉಂಟಾಗಿ ದುರಂತ ಸಂಭವಿಸಿತು.


Spread the love

LEAVE A REPLY

Please enter your comment!
Please enter your name here