3 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಮೆಟ್ರೋ ಸೇತುವೆ ಕೆಳಗೆ ಪುಟ್ಟ ಕಂದನ ಶವ ಪತ್ತೆ!

0
Spread the love

ಲಕ್ನೋ: ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಅತ್ಯಾಚಾರ ಘಟನೆಗಳು ಹೆಚ್ಚುತ್ತಿದ್ದು, ದೇಶದಲ್ಲಿ ಹೆಣ್ಮಕ್ಕಳ ಸುರಕ್ಷತೆಯ ಬಗ್ಗೆ ಪ್ರಶ್ನೆಗಳು ಮುನ್ನೆಲೆಗೆ ಬಂದಿದೆ. ಇದೀಗ ಮೂರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋದ ಆಲಂಬಾಗ್ ಪ್ರದೇಶದಲ್ಲಿ ನಡೆದಿದೆ.

Advertisement

ಪ್ರಜ್ಞಾಹೀನ ಸ್ಥಿತಿಯಲ್ಲಿ ಮೆಟ್ರೋ ಸೇತುವೆ ಕೆಳಗೆ ಬಾಲಕಿಯ ಶವ ಪತ್ತೆಯಾಗಿದೆ.  ಕೆಲವು ದುಷ್ಕರ್ಮಿಗಳು ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿ ಅಲ್ಲಿಯೇ ಎಸೆದು ಹೋಗಿದ್ದರು. ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಲಂಬಾಗ್ ಪೊಲೀಸ್ ಠಾಣೆಯಲ್ಲಿ ಸಂಬಂಧಿತ ವಿಭಾಗಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆ ಬಾಲಕಿ ಪೋಷಕರೊಂದಿಗೆ ಚಂದಾನಗರ ಮೆಟ್ರೋ ನಿಲ್ದಾಣದಲ್ಲಿ ಬಳಿ ವಾಸವಾಗಿದ್ದಳು. ಬೆಳಗ್ಗೆ ಪೋಷಕರಿಗೆ ಮಗಳು ಎಲ್ಲೂ ಕಾಣದ ಹಿನ್ನೆಲೆ ಹುಡುಕಲು ಪ್ರಾರಂಭಿಸಿದ್ದರು.

ಸ್ವಲ್ಪ ಸಮಯದ ನಂತರ ಅಮಾಯಕ ಬಾಲಕಿ ಮೆಟ್ರೋ ಸೇತುವೆಯ ಕೆಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.ಪೋಷಕರು ಬಾಲಕಿಯನ್ನು ಲೋಕಬಂಧು ಆಸ್ಪತ್ರೆಗೆ ಕರೆದೊಯ್ದು ಆಲಂಬಾಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here